ಬೆಂಗಳೂರು: ಈ ಬಾರಿ ಪ್ರಥಮ ಪಿಯುಸಿಯಿಂದ ದ್ವಿತೀಯ ಪಿಯುಸಿಗೆ ತೇರ್ಗಡೆ ಹೊಂದುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಗ್ರೇಡ್ ಸುಧಾರಿಸಿಕೊಳ್ಳುವ ನಿಟ್ಟಿನಲ್ಲಿ ಮೌಲ್ಯಮಾಪನವನ್ನು ಆಯ್ಕೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ನೀಡಿದೆ.
ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿಯ ಪ್ರಥಮ ಪಿಯುಸಿ ಪರೀಕ್ಷೆ ರದ್ದು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳಿಗೆ ಅವರ ಕನಿಷ್ಠ ಅಂಕಗಳ ಜೊತೆಗೆ ತೆರೆದ ಪುಸ್ತಕ ಪರೀಕ್ಷಾ ವ್ಯವಸ್ಥೆಯಡಿ ಅಂಕಗಳನ್ನು ನೀಡುತ್ತದೆ. ಇಲಾಖೆಯು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಈಗಾಗಲೇ ತೇರ್ಗಡೆ ಸಹ ಮಾಡಿದೆ. ಗ್ರೇಡ್ ಸುಧಾರಣೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಇಲಾಖಾ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯ ಕೊಂಡಿಯನ್ನು ನೀಡಲಾಗಿದೆ. ಶೈಕ್ಷಣಿಕ ವರ್ಷದ ಕೋರ್ಸ್ ವರ್ಕ್ನಿಂದಲೇ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ವಿದ್ಯಾರ್ಥಿಗಳು ಎರಡು ಪ್ರಶ್ನೆ ಪತ್ರಿಕೆಗಳನ್ನು ಬರೆಯಬೇಕು. ಇದಕ್ಕೆ ಜೂನ್ 10 -20 ರ ನಡುವಿನ 10 ದಿನಗಳ ಕಾಲಾವಕಾಶ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. 5 ದಿನಗಳ ನಂತರ ಜೂನ್ 26 ರ ಹೊತ್ತಿಗೆ ಎರಡನೇ ಪ್ರಶ್ನೆ ಪತ್ರಿಕೆ ನೀಡಲಾಗುತ್ತದೆ ಎಂದು ಇಲಾಖೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.