ಬೆಂಗಳೂರು: ಕೊರೋನಾ ಲಾಕ್ಡೌನ್ನಿಂದಾಗಿ ರಾಜ್ಯದಲ್ಲಿ ಹಣಕಾಸು ಸ್ಥಿತಿ ಸರಿ ಇರದೇ ಇದ್ದರೂ, ಬಡವರಿಗೆ ಸಂಕಷ್ಟ ಎದುರಾಗದಿರಲಿ ಎಂಬ ಉದ್ದೇಶದಿಂದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಅಪೇಕ್ಷೆಯಂತೆ ಸದ್ಯದಲ್ಲಿಯೇ ಹಾಸನದಲ್ಲಿ ಏರ್ಪೋರ್ಟ್ ಕಾಮಗಾರಿ ಆರಂಭಿಸಲಾಗುವುದು. ಹಾಗೆಯೇ ಹಾಸನ ಜಿಲ್ಲೆಯ ಕೆಲ ಭಾಗದಲ್ಲಿ ಸೋಂಕಿತರ ಪ್ರಮಾಣ ಅಧಿಕವಾಗಿದ್ದು, ನಿಯಂತ್ರಣಕ್ಕೆ ಹೆಚ್ಚು ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿಯೂ ಹೇಳಿದ್ದಾರೆ.
ಇನ್ನು ಕೊರೋನಾದಿಂದಾಗುತ್ತಿರುವ ಸಾವಿಗೆ ಸರ್ಕಾರವೇ ಹೊಣೆ ಎಂಬ ಶಾಸಕ ಎಚ್ ಡಿ ರೇವಣ್ಣ ಅವರ ಮಾತಿಗೆ ಎದುರೇಟು ನೀಡಿರುವ ಮುಖ್ಯಮಂತ್ರಿಗಳು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು. ಅವರು ಶಾಸಕರಾಗಿ ಅವರ ಕೆಲಸ ಮಾಡುವುದು ಬಿಟ್ಟು, ಬೇರೆಯವರ ಮೇಲೆ ಬೆರಳು ತೋರಬಾರದು ಎಂದು ತಿಳಿಸಿದ್ದಾರೆ. ಜೊತೆಗೆ ಮೂರನೇ ಅಲೆ ತಡೆಯಲು ಅಗತ್ಯ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.