ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಿಗೆ ಅನ್ಲಾಕ್, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.
ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಹೆಚ್ಚಿರುವ 11 ಜಿಲ್ಲೆಗಳಾದ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ, ಬೆಳಗಾವಿಗಳನ್ನು ಹೊರತುಪಡಿಸಿದಂತೆ ಉಳಿದ ಜಿಲ್ಲೆಗಳಲ್ಲಿ ಈ ನೂತನ ಮಾರ್ಗಸೂಚಿ ಜೂನ್ 14 ರಿಂದ ಜಾರಿಯಾಗಲಿದೆ.
ಇದರಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ಕಲ್ಪಿಸಲಾಗಿದೆ. ಬೀದಿ ಬದಿ ವ್ಯಾಪಾರಕ್ಕೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ಕಲ್ಪಿಸಲಾಗಿದೆ. ಕೊರೋನಾ ಮಾರ್ಗಸೂಚಿ ಪಾಲಿಸಿಕೊಂಡು 50% ಸಿಬ್ಬಂದಿಗಳನ್ನು ಬಳಸಿ ಎಲ್ಲ ಕಾರ್ಖಾನೆಗಳಿಗೂ ಕಾರ್ಯ ನಿರ್ವಹಿಸುವ ಅವಕಾಶ ನೀಡಲಾಗಿದೆ. ಗಾರ್ಮೆಂಟ್ಸ್ಗಳಲ್ಲಿ 30% ಸಿಬ್ಬಂದಿಗಳಿಗೆ ಅವಕಾಶ, ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ, ಕಟ್ಟಡ ಕಾರ್ಮಿಕರಿಗೆ ನಿರ್ಮಾಣ ಕಾಮಗಾರಿಗೆ ಅವಕಾಶ ಕಲ್ಪಿಸಲಾಗಿದೆ.
ಹಾಗೆಯೇ ಬಾರ್, ಹೊಟೇಲ್ಗಳಲ್ಲಿ ಪಾರ್ಸೆಲ್ಗೆ ಅವಕಾಶ, ಮಧ್ಯಾಹ್ನ 2 ಗಂಟೆಯ ವರೆಗೆ ಮಧ್ಯ ಮಳಿಗೆ ತೆರೆಯಲು ಅವಕಾಶ, ಮದುವೆಗಳಲ್ಲಿ 40 ಜನರಿಗೆ ಭಾಗವಹಿಸಲು ಅವಕಾಶ, ಅಂತ್ಯಕ್ರಿಯೆಯಲ್ಲಿ 5 ಜನರಿಗೆ ಅವಕಾಶ ಕಲ್ಪಿಸಲಾಗಿದೆ.
ಕೆಎಸ್ಆರ್ಟಿಸಿ, ಬಿಎಂಟಿಸಿ, ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು ಅವಕಾಶ ಇದೆ.
ನೈಟ್ ಕರ್ಫ್ಯೂ: ರಾತ್ರಿ ಏಳು ಗಂಟೆಯಿಂದ ಬೆಳಗ್ಗೆ 5 ಗಃಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿವೆ. ತುರ್ತು ಸೇವೆ ಹೊರತಾಗಿ ಈ ಸಂದರ್ಭದಲ್ಲಿ ಯಾರಿಗೂ ಸಂಚಾರಕ್ಕೆ ಅವಕಾಶ ಇಲ್ಲ.
ವೀಕೆಂಡ್ ಕರ್ಫ್ಯೂ: ಶುಕ್ರವಾರ ರಾತ್ರಿ ಏಳರಿಂದ ಸೋಮವಾರ ಬೆಳಗ್ಗೆ 5.ಗಂಟೆತ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಅಗತ್ಯ ಸೇವೆಗಳಿಗೆ, ಹಾಲು, ಹಣ್ಣು, ತರಕಾರಿ, ಬೀದಿ ಬದಿಯ ವ್ಯಾಪಾರಿಗಳು, ಮಧ್ಯದಂಗಡಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ತೆರೆಯಲು ಅವಕಾಶ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.