ಬೆಂಗಳೂರು: ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಫ್ಲೈನ್, ಆನ್ಲೈನ್ ಬೋಧನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಮೊಬೈಲ್ ಫೋನ್, ದೂರದರ್ಶನ ಸಂಪರ್ಕ ಹೊಂದಿರುವ ವಿದ್ಯಾರ್ಥಿಗಳು, ಈ ಯಾವುದೇ ವ್ಯವಸ್ಥೆ ಹೊಂದಿರದ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಯಲ್ಲಿ ಹೇಳಲಾಗಿದೆ. 1 -10 ನೇ ತರಗತಿ ವಿದ್ಯಾರ್ಥಿಗಳ ಪೋಷಕರಲ್ಲಿರುವ ತಾಂತ್ರಿಕ ಸಾಧನಗಳ ಲಭ್ಯತೆಯ ಮಾಹಿತಿ ಸಂಗ್ರಹಿಸಬೇಕು. ಇಲ್ಲವೇ ಅವರಿಗೆ ಮನೆಯ ಸಮೀಪವೇ ಶೈಕ್ಷಣಿಕ ಬೆಂಬಲ ನೀಡಲು ಬಯಸುವ ಸಹೃದಯರನ್ನು ಗುರುತಿಸಿ ಮಕ್ಕಳಿಗೆ ಕಲಿಕೆಗೆ ಅನುಕೂಲ ಕಲ್ಪಿಸಲು ಮಾರ್ಗಸೂಚಿ ತಿಳಿಸಿದೆ.
ಯಾವುದೇ ಫೋನ್, ದೂರದರ್ಶನ ಸೌಲಭ್ಯ ಹೊಂದಿರದ ವಿದ್ಯಾರ್ಥಿಗಳಿಗೆ ಹತ್ತಿರದ ಮನೆಯವರ ಸಮ್ಮತಿ ಪಡೆದು ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಪಾಠಗಳನ್ನು ವೀಕ್ಷಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಮನೆಯಲ್ಲಿ ರೇಡಿಯೋ ಇದ್ದಲ್ಲಿ ಅದರ ಮೂಲಕ ಪ್ರಸಾರವಾಗುವ ಪಾಠಗಳನ್ನು ಮನನ ಮಾಡಿಕೊಳ್ಳಲು ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆ.
ಹಾಗೆಯೇ ಪ್ರತಿ ವಿದ್ಯಾರ್ಥಿಗೆ ವಿಷಯವಾರು ಕೃತಿ ಸಂಪುಟ ನಿರ್ವಹಣೆ ಮಾಡಿ, ಮೌಲ್ಯಮಾಪನ ನಡೆಸಬೇಕಿದೆ. ಇದರ ವಿವರಗಳನ್ನು ಕಡ್ಡಾಯವಾಗಿ ಸ್ಯಾಟ್ಸ್ ತಂತ್ರಾಂಶದಲ್ಲಿ ಅಳವಡಿಸಬೇಕೆಂದು ಮಾರ್ಗಸೂಚಿಯಲ್ಲಿ ಇಲಾಖೆ ಸ್ಪಷ್ಟವಾಗಿ ತಿಳಿಸಿದೆ. ಹಾಗೆಯೇ ಇವೆಲ್ಲವುಗಳ ಬಗ್ಗೆ ಗಮನ ನೀಡಲು ಪ್ರತಿ ಜಿಲ್ಲೆಯಲ್ಲಿ ನೊಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಜುಲೈ ಒಂದರಿಂದ 2021-22 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.