ನವದೆಹಲಿ: ದೇಶದಾದ್ಯಂತ ಕೊರೋನಾ ಲಸಿಕೆಯನ್ನು ಪಡೆದವರ ಸಂಖ್ಯೆ 25.87 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸೋಮವಾರ ಒಂದೇ ದಿನದಲ್ಲಿ 18-44 ವರ್ಷದ 20,99,621 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ದೊರೆತಿದ್ದು, 1,63,326 ಮಂದಿಗೆ ಎರಡನೇ ಡೋಸ್ ಲಸಿಕೆ ದೊರೆತಿರುವುದಾಗಿ ಸಚಿವಾಲಯ ಹೇಳಿದೆ.
ದೇಶದಲ್ಲಿ ಕೊರೋನಾ ಲಸಿಕೆ ಅಭಾಯಾನದ ಮೂರನೇ ಹಂತಕ್ಕೆ ಚಾಲನೆ ದೊರೆತ ಬಳಿಕ 18-44 ರ ವರೆಗಿನ 4,34,35,032 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. 8,33,808 ಮಂದಿಗೆ ಎರಡನೇ ಡೋಸ್ ಲಸಿಕೆ ದೊರೆತಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಬಿಹಾರ, ದೆಹಲಿ, ಗುಜರಾತ್, ಹರ್ಯಾಣ, ಜಾರ್ಖಂಡ್, ಕರ್ನಾಟಕ, ಕೇರಳ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಒಡಿಶಾ, ಉ.ಪ್ರದೇಶ, ಪ. ಬಂಗಾಳಗಳಲ್ಲಿ 18-44 ವಯಸ್ಸಿನ10 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ.
ಜೂ. 14 ರಂದು ಲಸಿಕಾ ಅಭಿಯಾನ ಆರಂಭವಾಗಿ 150 ದಿನಗಳು ಕಳೆದಿದ್ದು, ನಿನ್ನೆ 35,96,462 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಈ ಪೈಕಿ 31,84,503 ಫಲಾನುಭವಿಗಳಿಗೆ ಮೊದಲ ಲಸಿಕೆ ನೀಡಲಾಗಿದೆ. 4,11,959 ಮಂದಿಗೆ ಎರಡನೇ ಡೋಸ್ ಲಸಿಕೆ ಹಾಕಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.