ನವದೆಹಲಿ: ದೇಶವನ್ನು ಕಂಗೆಡಿಸಿದ್ದ ಕೊರೋನಾ ಸೋಂಕಿತರ ಪ್ರಕರಣ ದಿನೇ ದಿನೇ ಇಳಿಮುಖವಾಗುತ್ತಿದೆ. ಕಳೆದ 77 ದಿನಗಳಿಗೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ ಕಡಿಮೆ ಸೋಂಕಿತರ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಆರೋಗ್ಯ ಇಲಾಖೆ ಈ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 60,471 ಮಂದಿ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ತಿಳಿಸಿದೆ. ಸುಮಾರು 2726 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಒಟ್ಟು ಸಾವಿನ ಸಂಖ್ಯೆ 3.77 ಲಕ್ಷಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 1,17,525 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಚೇತರಿಕಾ ದರ 95.54% ಗಳಷ್ಟಾಗಿದೆ. ಸದ್ಯ ದೇಶದಲ್ಲಿ 91,33,378 ಸಕ್ರಿಯ ಪ್ರಕರಣಗಳಿವೆ. ದೇಶದ ಐದು ರಾಜ್ಯಗಳಾದ ತಮಿಳುನಾಡು, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಆಂಧ್ರಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ಅಧಿಕವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.