ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣ ಸಂಸ್ಥೆಯ ಅಧೀನದಲ್ಲಿರುವ ಎಲ್ಲಾ ಸಂರಕ್ಷಿತ ಸ್ಮಾರಕಗಳು, ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂ. 15 ರಿಂದ ಸಾರ್ವಜನಿಕರ ಭೇಟಿಗೆ ತೆರೆಯಲಾಗುವುದು ಎಂದು ಸಂಸ್ಥೆ ಹೇಳಿದೆ.
ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿದ್ದ ಹಿನ್ನೆಲೆಯಲ್ಲಿ 2021 ರ ಎಪ್ರಿಲ್ ತಿಂಗಳಿನಲ್ಲಿ ದೇಶದ ಎಲ್ಲಾ ಸ್ಮಾರಕ, ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ದೇಶದ 100 ವರ್ಷಕ್ಕಿಂತ ಹಳೆಯದಾದ ಸುಮಾರು 3,684 ಸ್ಮಾರಕಗಳು ಎಎಸ್ಐ ವ್ಯಾಪ್ತಿಯಲ್ಲಿವೆ.
ಉತ್ತರ ಪ್ರದೇಶದಲ್ಲಿ 741 ಸ್ಮಾರಕಗಳು ಇವೆ. ಇದರಲ್ಲಿ ವಿಶ್ವ ಪ್ರಸಿದ್ಧ ತಾಜ್ ಮಹಲ್ ಮತ್ತು ಆಗ್ರಾ ಸಹ ಸೇರಿವೆ. ಕರ್ನಾಟಕದಲ್ಲಿ ಹಂಪಿ, ಬಾದಾಮಿ, ಪಟ್ಟದಕಲ್ಲು, ಗೋಳಗುಮ್ಮಟ ಸೇರಿದಂತೆ ಇನ್ನೂ ಅನೇಕ ಐತಿಹಾಸಿಕ ಸ್ಮಾರಕಗಳು ಎಎಸ್ಐ ವ್ಯಾಪ್ತಿಯಲ್ಲಿ ಬರುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.