ನವದೆಹಲಿ: ಕೊರೋನಾ ವ್ಯಾಕ್ಸಿನ್ ಪಡೆಯಲು Co-WIN ಮುಖೇನ ಪೂರ್ವ ನೋಂದಣಿ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೊರೋನಾ ನೋಂದಣಿ ಮಾಡಿಕೊಂಡವರಿಗಷ್ಟೇ ಸದ್ಯದ ಮಟ್ಟಿಗೆ ದೇಶದಲ್ಲಿ ಲಸಿಕೆ ನೀಡಲಾಗುತ್ತಿತ್ತು. ಆದರೆ ಗ್ರಾಮೀಣ ಪ್ರದೇಶದ ಜನರು ಈ ನೀತಿಯಿಂದ ಸಮಸ್ಯೆ ಅನುಭವಿಸುವಂತಾಗಿತ್ತು. ಈ ಸಂಬಂಧ ವರದಿ ಸಿಕ್ಕ ತಕ್ಷಣ ಕೇಂದ್ರ ಸರ್ಕಾರ ತನ್ನ ನೀತಿಯನ್ನು ಬದಲಾಯಿಸುವ ಮೂಲಕ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಟ್ಟಿದೆ.
ದೇಶದ ಯಾವುದೇ ಭಾಗದ 18 ವರ್ಷ ಮೇಲ್ಪಟ್ಟವರು ತಮ್ಮ ಪ್ರದೇಶಗಳಲ್ಲಿನ ವ್ಯಾಕ್ಸಿನೇಷನ್ ಕೇಂದ್ರಕ್ಕೆ ತೆರಳಿ ಅಲ್ಲಿಯೇ ನೋಂದಣಿ ಮಾಡಿಕೊಂಡು, ಅಲ್ಲೇ ಲಸಿಕೆ ಪಡೆಯಬಹುದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಸಂಬಂಧ ಆರೋಗ್ಯ ಕಾರ್ಯಕರ್ತರು ಅಥವಾ ಎಸ್ಎಂಎಸ್ ಮೂಲಕ ಗ್ರಾಮೀಣ ಭಾಗದ ಜನರಿಗೆ ಲಸಿಕೆ ಪಡೆಯುವಂತೆ ನೇರ ನೋಂದಣಿ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆಯೂ ಪ್ರೇರೇಪಿಸುತ್ತಿದೆ. ಜೊತೆಗೆ 1075 ಸಹಾಯವಾಣಿ ಮೂಲಕವೂ ನೋಂದಣಿ ಮಾಡಿಕೊಳ್ಳಲು ಜನಸಾಮಾನ್ಯರಿಗೆ ಅವಕಾಶ ಕಲ್ಪಿಸಲಾಗಿದೆ.
ಕೊರೋನಾ ನಿಯಂತ್ರಣಕ್ಕೆ ಲಸಿಕೆ 90% ಪರಿಣಾಮಕಾರಿ ಎಂಬುದಾಗಿ ಅಧ್ಯಯನಗಳು ಹೇಳಿವೆ. ಡೆಲ್ಟಾ ರೂಪಾಂತರ ನಿಯಂತ್ರಣಕ್ಕಂತೂ ಲಸಿಕೆ ಹೆಚ್ಚು ಪರಿಣಾಮ ಬೀರುವುದಾಗಿ ಇಂಗ್ಲೆಂಡ್ನ ಸಾರ್ವಜನಿಕ ಆರೋಗ್ಯ ಕ್ಷೇತ್ರದ ತಜ್ಞರ ಅಧ್ಯಯನ ಸಹ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.