ನವದೆಹಲಿ: ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಕಸ್ಟಮೈಸ್ಡ್ ಕ್ರ್ಯಾಶ್ ಕೋರ್ಸ್ (ಸಿಸಿಸಿ) ಕಾರ್ಯಕ್ರಮಕ್ಕೆ ಜೂನ್ 18ರಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಜೂನ್ 18ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದೇಶದ 26 ಜಿಲ್ಲೆಗಳಿಗೆ ಸಂಬಂಧಿಸಿದಂತೆ 111 ತರಬೇತಿ ಕೇಂದ್ರಗಳಲ್ಲಿ ಈ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲ ಸಚಿವರು ಹಾಜರಿರಲಿದ್ದಾರೆ ಎಂದು ಮೂಲಗಳು ಹೇಳಿವೆ.
ಈ ಕಾರ್ಯಕ್ರಮದ ಮುಖೇನ ದೇಶಾದ್ಯಂತ 1 ಲಕ್ಷ ಕೊರೋನಾ ಯೋಧರ ಕೌಶಲಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ. ಆರು ಕಸ್ಟಮೈಸ್ಡ್ ಮಾಡಿದ ಉದ್ಯೋಗ ಪಾತ್ರಗಳಲ್ಲಿ ಕೊರೋನಾ ಯೋಧರಿಗೆ ತರಬೇತಿ ನೀಡಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯಡಿಯಲ್ಲಿ ಈ ಕಾರ್ಯಕ್ರಮ ವಿನ್ಯಾಸಗೊಳಿಸಲಾಗಿದೆ. ಸುಮಾರು 276 ಕೋಟಿ ರೂ. ವೆಚ್ಚದಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.