ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜೂ. 21 ರಿಂದ ತೊಡಗಿದಂತೆ ಕೆಲ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಮಾಲ್, ರೆಸ್ಟೋರೆಂಟ್, ಶಾಪಿಂಗ್ ಕಾಂಪ್ಲೆಕ್ಸ್, ಮದುವೆ ಮಂಟಪಗಳು ಸೇರಿದಂತೆ ಇನ್ನೂ ಕೆಲವನ್ನು ತೆರೆಯಬಹುದು ಎಂದು ಸಮಿತಿ ತಿಳಿಸಿದೆ. ಹಾಗೆಯೇ ಕಟ್ಟಿಂಗ್ ಶಾಪ್, ಸಲೂನ್, ಸ್ಪಾ ತೆರೆಯಬಹುದು. ಆದರೆ ಇವೆಲ್ಲವುಗಳಿಗೂ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಬೇಕು. ಹಾಗೆಯೇ ಕೇವಲ 50% ಗಳಷ್ಟು ಜನರು ಸೇರುವುದಕ್ಕೆ ಮಾತ್ರವೇ ಅವಕಾಶ ನೀಡಬೇಕು ಎಂದು ಸಮಿತಿ ಸಲಹೆ ನೀಡಿದೆ.
ಹಾಗೆಯೇ ಜೂನ್ ಅಂತ್ಯದ ವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಬೇಕು. ಸಾರ್ವಜನಿಕ ಸಮಾವೇಶ, ಧರಣಿ, ಜಾತ್ರೆ, ಹಬ್ಬಗಳ ಆಚರಣೆಗೆ ನಿರ್ಬಂಧ ಹೇರಬೇಕು. ಪರಿಸ್ಥಿತಿಗೆ ಅನುಗುಣವಾಗಿ ಜನರ ಓಡಾಟಕ್ಕೆ ಅನುಮತಿ ನೀಡಬೇಕು ಎಂದು ಹೇಳಿದೆ. ಹಾಗೆಯೇ ಅನ್ಲಾಕ್ ಮೂರನೇ ಹಂತದಲ್ಲಿ ಜಿಮ್, ಯೋಗ ಕೇಂದ್ರ, ಧಾರ್ಮಿಕ ಕೇಂದ್ರ, ಚಿತ್ರಮಂದಿರ, ಸ್ಪೋರ್ಟ್ಸ್ ಕ್ಲಬ್, ಕ್ಲಬ್ ಹೌಸ್, ಶೌಚಾಲಯ ಆರಂಭಿಸಬೇಕು.
ನೈಟ್ ಕರ್ಫ್ಯೂ, ಶಾಲಾ ಕಾಲೇಜು ಪುನರಾರಂಭ ಸಂಬಂಧಿಸಿದಂತೆ ಪ್ರತ್ಯೇಕ ನಿರ್ಧಾರ ಕೈಗೊಳ್ಳುವಂತೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.