ನವದೆಹಲಿ: ಭಾರತವು ಹೊಸ ಕೋವಿಡ್ -19 ಪ್ರಕರಣಗಳಲ್ಲಿ ಕುಸಿತವನ್ನು ವರದಿ ಮಾಡುತ್ತಿದ್ದು, ತುಸು ನಿರಾಳತೆಯನ್ನು ಒದಗಿಸಿದೆ. ಕಳೆದ 24 ಗಂಟೆಗಳಲ್ಲಿ 62,480 ಜನರು ಕೊರೋನಾವೈರಸ್ ಸಾಂಕ್ರಾಮಿಕಕ್ಕೆ ತುತ್ತಾಗಿದ್ದಾರೆ. ಈ ಅವಧಿಯಲ್ಲಿ, ದೇಶದಲ್ಲಿ 1,587 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಹೊಸ ಕೋವಿಡ್-19 ಪ್ರಕರಣಗಳು ಸತತವಾಗಿ 11ನೇ ದಿನಕ್ಕೆ ಒಂದು ಲಕ್ಷಕ್ಕಿಂತಲೂ ಕಡಿಮೆಯಾಗಿವೆ. ದೇಶದಲ್ಲಿ ಪಾಸಿಟಿವಿಟಿ ಪ್ರಮಾಣವು ಈಗ 3.24% ರಷ್ಟಿದೆ.
ಇಂದು ಬೆಳಿಗ್ಗೆ ಬಿಡುಗಡೆಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತವು ಕಳೆದ 24 ಗಂಟೆಗಳಲ್ಲಿ 62,480 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದ್ದು, 88,977 ರೋಗಿಗಳು ಚೇತರಿಸಿಕೊಂಡಿದ್ದಾರೆ. ಚೇತರಿಕೆ ದರ 96.03% ಕ್ಕೆ ಸುಧಾರಿಸಿದೆ.
ಇದರೊಂದಿಗೆ, ಭಾರತದ ಸಕ್ರಿಯ ಪ್ರಕರಣ ಶುಕ್ರವಾರ 7,98,656 ಕ್ಕೆ ಇಳಿದಿದೆ, ಇದು 73 ದಿನಗಳ ನಂತರ 8 ಲಕ್ಷಕ್ಕಿಂತ ಕಡಿಮೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.