ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಹಲವು ಸಮಯದ ಕನಸು, ದೈಹಿಕ ಶಿಕ್ಷಣ ಪರಿವೀಕ್ಷಕ ಹುದ್ದೆಗೆ ಭಡ್ತಿ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್ – 1 ಹುದ್ದೆಯಿಂದ ಗ್ರೂಪ್ ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ 148 ಹುದ್ದೆಗಳಿಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಆ ಮೂಲಕ ಅವರ ಬಹುಕಾಲದ ಬೇಡಿಕೆಯೊಂದನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ಕಳೆದ ಐದು ವರ್ಷಗಳಿಂದ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಯಾವುದೇ ಪದೋನ್ನತಿ ನೀಡಿರಲಿಲ್ಲ. ನೆನೆಗುದಿಗೆ ಬಿದ್ದಿದ್ದ ಈ ಪ್ರಕ್ರಿಯೆಗೆ ಇದೀಗ ರಾಜ್ಯ ಸರ್ಕಾರ ಮತ್ತೆ ಚಾಲನೆ ನೀಡಿರುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.