ಬೆಂಗಳೂರು: ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಶೀಘ್ರದಲ್ಲೇ ಮೇಕೆದಾಟು ಯೋಜನೆಯನ್ನು ಶೀಘ್ರ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಈ ಯೋಜನೆ ಪ್ರಮುಖವಾಗಿ ಕುಡಿಯುವ ನೀರಿಗೆ ಸಂಬಂಧಿಸಿರುವುದು. ಈ ಯೋಜನೆಗೆ ತಡೆ ಕೋರುವ ಅರ್ಜಿ ವಿಚಾರಣೆ ನಡೆಸಿದ ಎನ್ ಜಿ ಟಿ ರಾಜ್ಯದ ವಾದವನ್ನು ಮನ್ನಿಸಿ ಅರ್ಜಿಯನ್ನು ಇತ್ಯರ್ಥ ಮಾಡಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗನೆ ಎಲ್ಲಾ ಅನುಮತಿಗಳನ್ನು ಪಡೆದು ಯೋಜನೆ ಪ್ರಾರಂಭಿಸುವುದಾಗಿ ಹೇಳಿದ್ದಾರೆ.
ಈ ಯೋಜನೆಯಿಂದ 4000 ಮೆಗಾವ್ಯಾಟ್ ವಿದ್ಯುತ್ ದೊರೆಯಲಿದ್ದು, ಬೆಂಗಳೂರಿಗೆ ಕುಡಿಯುವ ನೀರು ದೊರೆಯಲಿದೆ. ಈ ನೀರನ್ನು ಕೃಷಿ ಉದ್ದೇಶಗಳಿಗೆ ಬಳಕೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.