ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸರಳವಾಗಿ ನಡೆಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆ ಈ ಸಂಬಂಧ ಅಧಿಕೃತ ಮಾರ್ಗಸೂಚಿ ಹೊರಡಿಸಿದೆ.
ಕೊರೋನಾದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಕಳೆದ ಬಾರಿ ಅಂದರೆ 9 ನೇ ತರಗತಿಯಲ್ಲಿ ಇರುವಾಗಲೂ ಪರೀಕ್ಷೆ ಬರೆದಿಲ್ಲ. ಈ ಬಾರಿ ಪ್ರಿಪರೇಟರಿ ಪರೀಕ್ಷೆಗಳು ಸಹ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆಗಳನ್ನು ನಡೆಸುವುದು ಅನಿವಾರ್ಯವಾಗಿದೆ. ಇದಕ್ಕಾಗಿ ಪರೀಕ್ಷೆಗಳನ್ನು ಸರಳೀಕರಿಸಿ ಎರಡು ದಿನಗಳ ಪರೀಕ್ಷೆ ನಡೆಸಲಾಗುತ್ತದೆ. ಒಂದು ದಿನ ಕೋರ್ ವಿಷಯಗಳನ್ನು ಮತ್ತು ಇನ್ನೊಂದು ದಿನ ಭಾಷಾ ವಿಷಯಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದೆ.
ಈ ಪರೀಕ್ಷೆಯಲ್ಲಿ ಕೇವಲ ಬಹು ಉತ್ತರ ಆಯ್ಕೆ ಆಧರಿತ ಪ್ರಶ್ನೆಗಳಿರಲಿವೆ. ಕೊರೋನಾ ಹಿನ್ನೆಲೆಯಲ್ಲಿ 6 ದಿನಗಳ ಕಾಲ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆತ ತೆರಳುವುದು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ಮೂರು ವಿಷಯಕ್ಕೆ ಒಂದು ಪ್ರಶ್ನೆ ಪತ್ರಿಕೆಯಂತೆ ಎರಡು ದಿನ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದೆ. ಹಾಗೆಯೇ ಈ ಬಾರಿ ಕನಿಷ್ಠ ಅಂಕ ನೀಡಿ ಎಲ್ಲರನ್ನೂ ಉತ್ತೀರ್ಣಗೊಳಿಸಲಾಗುವುದು ಎಂದು ಇಲಾಖೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.