ಬೆಂಗಳೂರು: ಕೊರೋನಾ ಮೂರನೇ ಅಲೆ ರಾಜ್ಯದಲ್ಲಿ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಏರಿಕೆಯಾಗುವ ಸಂಭವವಿದ್ದು, ಸುಮಾರು 3.4 ಲಕ್ಷ ಮಕ್ಕಳ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಹೃದ್ರೋಗ ತಜ್ಞ ಡಾ ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಎಚ್ಚರಿಕೆ ನೀಡಿದೆ.
ಹಾಗೆಯೇ ಕೊರೋನಾ ಮೂರನೇ ಅಲೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗೆಗೂ 16 ಮಂದಿ ಸದಸ್ಯರನ್ನು ಒಳಗೊಂಡ ಈ ತಂಡ ಶಿಫಾರಸು ಮಾಡಿದೆ. ಸೋಂಕು ಹೆಚ್ಚಾಗಿ ಮಕ್ಕಳ ಮೇಲೆ ಅಧಿಕ ಪರಿಣಾಮ ಬೀರಲಿದೆ ಎಂದು ತಂಡ ತನ್ನ ವರದಿಯಲ್ಲಿ ತಿಳಿಸಿದೆ. ರಾಜ್ಯದ ಒಟ್ಟು ಜನಸಂಖ್ಯೆಯ 2.2% ಗಳಷ್ಟು ಜನರು ಸೋಂಕಿಗೆ ತುತ್ತಾಗಲಿದ್ದಾರೆ ಎಂದು ಈ ವರದಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಅಗತ್ಯ ಹಾಸಿಗೆಗಳ ವ್ಯವಸ್ಥೆ, ಐಸಿಯು, ವೆಂಟಿಲೇಟರ್ ಸೇರಿದಂತೆ ವೈದ್ಯಕೀಯ ಮೂಲಸೌಕರ್ಯಗಳ ಸಿದ್ಧತೆ ಮಾಡಿಕೊಳ್ಳುವಂತೆಯೂ ತಜ್ಞರ ತಂಡ ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೆಯೇ ಬಾಲ ಆರೈಕೆ ಕೇಂದ್ರಗಳನ್ನು ತೆರೆಯುವಂತೆಯೂ ಸರ್ಕಾರಕ್ಕೆ ಸೂಚಿಸಲಾಗಿದೆ.
ತಜ್ಞರು ಸಲ್ಲಿಸಿದ ವರದಿಯನ್ನು ಆಧರಿಸಿ ಮುಂದಿನ 45 ದಿನಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.