ಉಡುಪಿ: ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾಲ್ಕು ಫುಟ್ ಓವರ್ ಬ್ರಿಡ್ಜ್ ರಚನೆಗೆ ಕೇಂದ್ರ ಸರ್ಕಾರ 4.36 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಈ ಹೆದ್ದಾರಿಯ ಹಲವು ಭಾಗದಲ್ಲಿ ಕ್ರಾಸಿಂಗ್ಗಳನ್ನು ನಿರ್ಮಾಣ ಮಾಡಬೇಕಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡಲಾಗಿತ್ತು. ಈ ಭಾಗದ ಜನರ ಅಪೇಕ್ಷೆಯನ್ನು ಪರಿಗಣಿಸಿರುವ ಕೇಂದ್ರ ಸರ್ಕಾರ ಉಡುಪಿ ಜಿಲ್ಲೆಯ ನಾಲ್ಕು ಪ್ರದೇಶಗಳಿಗೆ ಸಂಬಂಧಿಸಿದಂತೆ ಈ ಮೊತ್ತವನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.
ಕಾಪು ವಿಧಾನಸಭಾ ಕ್ಷೇತ್ರದ ಬಡಾ ಎರ್ಮಾಳು ಬಳಿ, ಕುಂದಾಪುರದ ಆನೆಗುಡ್ಡೆ ಸಮೀಪ, ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ಮಹೇಶ್ ಆಸ್ಪತ್ರೆ, ಅಂಬಾಗಿಲು ಸಮೀಪ ಈ ಮೇಲ್ಸೇತುವೆಗಳು ನಿರ್ಮಾಣವಾಗಲಿದೆ ಎಂದು ಕರಂದ್ಲಾಜೆ ತಿಳಿಸಿದ್ದಾರೆ. ಶೀಘ್ರದಲ್ಲೇ ಕಾಮಗಾರಿ ಟೆಂಡರ್ ಮುಗಿಸಿ, ಮೇಲ್ಸೇತುವೆ ಕೆಲಸಗಳು ಆರಂಭಗೊಳ್ಳಲಿವೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.