ಬೆಂಗಳೂರು: ರಾಜ್ಯದ ಶಿಕ್ಷಣ ಪದ್ಧತಿಯಲ್ಲಿ ಯೋಗ ಶಿಕ್ಷಣ ಪಠ್ಯಕ್ರಮ ಅಳವಡಿಸಲಾಗುವುದು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಅವರು ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಗಳ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಏಳನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಿ ಮಾತನಾಡಿದರು.
ಮನುಷ್ಯನ ದೈಹಿಕ, ಮಾನಸಿಕ ಸದೃಢತೆಗೆ ಹಿರಿಯರು ನೀಡಿದ ಕೊಡುಗೆ ಯೋಗಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರೆತಿದೆ. ಮಕ್ಕಳ ಏಕಾಗ್ರತೆ, ಬೆಳವಣಿಗೆಯಲ್ಲಿಯೂ ಯೋಗ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಬಾರಿಯಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗವನ್ನು ಪಠ್ಯಕ್ರಮವಾಗಿ ಅಳವಡಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ. ಮಕ್ಕಳು ಶೈಕ್ಷಣಿಕ ಬೆಳವಣಿಗೆ ಹೊಂದುವುದರ ಜೊತೆಗೆ, ದೈಹಿಕ – ಮಾನಸಿಕವಾಗಿ ಬೆಳವಣಿಗೆ ಹೊಂದಲು ಯೋಗ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.