ಬೆಂಗಳೂರು: ಜನಸಾಮಾನ್ಯರ ತುರ್ತು ಅಗತ್ಯ ಸೇವೆಗಳನ್ನು ಪಡೆಯಲು ಹಾಗೂ ಕರಕುಶಲ ಕರ್ಮಿಗಳಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಯುವಜನ ಮತ್ತು ಕ್ರೀಡಾ ಇಲಾಖೆ ‘ಕುಶಲ ಕೋಶ’ ಮೊಬೈಲ್ ಅಪ್ಲಿಕೇಶನ್ ಅನ್ನು ಲೋಕಾರ್ಪಣೆ ಮಾಡಿದೆ.
ಇದನ್ನು ಸಚಿವ ನಾರಾಯಣ್ ಗೌಡ ಅವರು ಲೋಕಾರ್ಪಣೆ ಮಾಡಿದ್ದು, ಇದು ಜನಸಾಮಾನ್ಯರಿಗೆ ಅನುಕೂಲ ಒದಗಿಸುವ ತಂತ್ರಜ್ಞಾನವಾಗಿದೆ. ಜನರಿಗೆ ತಮಗೆ ಅಗತ್ಯವಿರುವ ಕರಕುಶಲ ಕರ್ಮಿಗಳ ಪತ್ತೆಗೆ ಇದು ಸಹಾಯ ಮಾಡಿದರೆ, ಕರಕುಶಲ ಕರ್ಮಿಗಳಿಗೆ ತಮ್ಮ ಸ್ವವಿವರಗಳನ್ನು ಇದರಲ್ಲಿ ಲಗತ್ತಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಇದು ದ್ವಿಭಾಷಾ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಇದನ್ನು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಹಾಗೂ ಆಯುಷ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಅಭಿವೃದ್ಧಿ ಮಾಡಿದೆ. ಈ ಅಪ್ಲಿಕೇಶನ್ ಯೋಗ ಶಿಕ್ಷಕರು, ಎಲೆಕ್ಟ್ರಿಷಿಯನ್, ಪ್ಲಂಬರ್, ಪೈಂಟರ್, ಡ್ರೈಕ್ಲೀನರ್, ಜಿಮ್ ತರಬೇತುದಾರರು ಸೇರಿದಂತೆ ಎಲ್ಲಾ ಕರಕುಶಲ ಕ್ಷೇತ್ರಗಳಿಗೂ ಅನುಕೂಲ ಕಲ್ಪಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.