ಬೆಂಗಳೂರು: ನಗರದ ಜಕ್ಕೂರಿನಲ್ಲಿ ಹೆಲಿ ಟೂರಿಸಂ ಆರಂಭಕ್ಕೆ ಸರ್ಕಾರ ಅನುಮತಿಸಿದ್ದು, ಈ ಹಿನ್ನೆಲೆಯಲ್ಲಿ ಏಕಕಾಲಕ್ಕೆ 6 ಹೆಲಿಕಾಪ್ಟರ್ಗಳು ಲ್ಯಾಂಡಿಗ್ ಮತ್ತು ಟೇಕಾಫ್ ಆಗುವಂತೆ ಏರ್ ಸ್ಟ್ರಿಪ್ ನಿರ್ಮಿಸಲು ನಿರ್ಧರಿಸಲಾಗಿದೆ.
ಪ್ರವಾಸಿಗರು, ಗಣ್ಯರು, ತುರ್ತು ಸಂದರ್ಭಗಳಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ತಲುಪಲು ಅವಕಾಶವಾಗುವಂತೆ ಈ ಹೆಲಿಪೋರ್ಟ್ ನಿರ್ಮಿಸಲಾಗುತ್ತಿದೆ. ಹಾಗೆಯೇ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರವಾಸಿಗರಿಗೆ ರಾಜ್ಯದ ಇತರ ಜಿಲ್ಲೆಗಳಿಗೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ತೆರಳಲು ಇದರಿಂದ ಅನುಕೂಲವಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಮೈಸೂರು, ಗುಲ್ಬರ್ಗ, ಮಂಗಳೂರು, ಬಳ್ಳಾರಿ, ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ ಹೆಲಿಪೋರ್ಟ್ ನಿರ್ಮಿಸಿ, ಬೆಂಗಳೂರಿನ ಜಕ್ಕೂರು ವೈಮಾನಿಕ ಕೇಂದ್ರದ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹೆಲಿಕಾಪ್ಟರ್ ಸಂಪರ್ಕ ಕಲ್ಪಿಸಲಾಗುತ್ತದೆ. ಇದು ಸಮಯದ ಉಳಿತಾಯ ಮತ್ತು ರಸ್ತೆಗಳ ಬಳಕೆಯನ್ನು ಕಡಿಮೆ ಮಾಡುವಲ್ಲಿಯೂ ಮಹತ್ವ ವಹಿಸಲಿದೆ. ಹಂತ ಹಂತವಾಗಿ ಹೆಲಿ ಟೂರಿಸಂ ಅಭಿವೃದ್ಧಿ ಮಾಡಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.