ಮಂಗಳೂರು: ಜೂ. 23 ರಿಂದ ತೊಡಗಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ವ್ಯವಹಾರ ನಡೆಸಲು ಅನುಕೂಲ ಕಲ್ಪಿಸಲಾಗುತ್ತದೆ. ಜಿಲ್ಲೆಯಲ್ಲಿ ಲಾಕ್ಡೌನ್ನಿಂದಾಗಿ ಜವಳಿ ಸೇರಿದಂತೆ ಇನ್ನಿತರ ವ್ಯಾಪಾರಸ್ಥರು ಅನಾನುಕೂಲ, ಸಂಕಷ್ಟ ಅನುಭವಿಸುವಂತಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ನಿಲುವಿಗೆ ಅನುಮತಿಸಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿತ್ತು. ಅವರೊಂದಿಗೆ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದು, ಬಳಿಕ ಈ ನಿರ್ಣಯ ಕೈಗೊಳ್ಳಲಾಗಿದೆ. ಜನಜೀವನಕ್ಕೆ ತೊಂದರೆಯಾಗದ ರೀತಿಯಲ್ಲಿ ನಾಳೆಯಿಂದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಇನ್ನಿತರ ಎಲ್ಲಾ ಕೊರೋನಾ ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.