ಬೆಂಗಳೂರು: ಕೊರೋನಾ ವಿರುದ್ಧ ಲಸಿಕೆ ಅಭಿಯಾನದಲ್ಲಿ ಕರ್ನಾಟಕ ಇದುವರೆಗೆ ಎರಡು ಕೋಟಿಯಷ್ಟು ಲಸಿಕೆ ನೀಡುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ.
ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ದಕ್ಷಿಣ ಭಾರತದಲ್ಲಿಯೇ ಅತೀ ಹೆಚ್ಚು ಲಸಿಕೆ ನೀಡುವ ಮೂಲಕ ಕರ್ನಾಟಕ ನಂ. 1 ಸ್ಥಾನದಲ್ಲಿದೆ. ಈ ವರ್ಷದ ಅಂತ್ಯದೊಳಗೆ ರಾಜ್ಯದ ಎಲ್ಲರಿಗೂ ಲಸಿಕೆ ಒದಗಿಸುವುದು ರಾಜ್ಯ ಸರ್ಕಾರದ ಬದ್ಧತೆಯಾಗಿದೆ. ಅದನ್ನು ಸಾಧಿಸಲು ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಸಚಿವ ಡಾ ಕೆ ಸುಧಾಕರ್ ಮಾಹಿತಿ ನೀಡಿದ್ದು, ಮಂಗಳವಾರದವರೆಗೆ ರಾಜ್ಯ 2 ಕೋಟಿ ವ್ಯಾಕ್ಸಿನ್ ವಿತರಣೆ ಮಾಡಿದೆ. ಲಸಿಕೆ ವಿತರಣೆಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲಿಯೇ ನಂ. 1 ಸ್ಥಾನದಲ್ಲಿದೆ. ಈ ವರ್ಷದ ಡಿಸೆಂಬರ್ 31 ರೊಳಗೆ ರಾಜ್ಯದ ಎಲ್ಲರಿಗೂ ಲಸಿಕೆ ಹಾಕುವ ಗುರಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.