ಬೆಂಗಳೂರು: ಸರ್ಕಾರಿ ಉದ್ಯೋಗದಲ್ಲಿರುವ ಮಹಿಳಾ ನೌಕರರಿಗೆ ಅವರ ಸೇವಾವಧಿಯಲ್ಲಿ 180 ದಿನಗಳನ್ನು ಶಿಶುಪಾಲನಾ ರಜೆ ನೀಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.
ಮಹಿಳಾ ಸಿಬ್ಬಂದಿಗಳು ಹೊಂದಿರುವ ಮಕ್ಕಳ ಸಂಖ್ಯೆಯನ್ನು ಪರಿಗಣಿಸದೆ, ಕಿರಿಯ ಮಗುವಿಗೆ 18 ವರ್ಷ ತುಂಬುವ ವರೆಗೆ ಈ ರಜೆ ಸೌಲಭ್ಯವನ್ನು ಬಳಕೆ ಮಾಡಬಹುದು ಎಂದು ಸರ್ಕಾರ ತಿಳಿಸಿದೆ. ಹಾಗೆಯೇ ಪ್ರತಿ ಬಾರಿ ರಜೆ ಪಡೆಯುವಾಗ ಕನಿಷ್ಠ 15 ದಿನಗಳಿಗೂ ಕಡಿಮೆ ಇಲ್ಲದಂತೆ ರಜೆ ಪಡೆಯುವಂತೆ ಆದೇಶದಲ್ಲಿ ತಿಳಿಸಿದೆ.
ಈ ಸಂಬಂಧ ಮಕ್ಕಳ ಆರೈಕೆ, ಪಾಲನೆ, ಪೋಷಣೆಗೆ ಸಂಬಂಧಿಸಿದಂತೆ ಶಿಶು ಪಾಲನಾ ರಜೆ ನೀಡುವಂತೆ ರಾಜ್ಯ ಸರ್ಕಾರಕ್ಕೆ, ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿತ್ತು. ಈ ಸಂಬಂಧ ಬಜೆಟ್ನಲ್ಲಿಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ನೀಡಿದ್ದರು. ಇದೀಗ ಸರ್ಕಾರ ಶಿಶುಪಾಲನಾ ರಜೆ ನೀಡಿದ್ದು, ಇದರ ಅನುಕೂಲವನ್ನು ನೌಕರಿಯಲ್ಲಿರುವ 75% ರಷ್ಟು ಮಹಿಳೆಯರು ಪಡೆಯಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.