ಬೆಂಗಳೂರು: 2021-22 ನೇ ಸಾಲಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಾವತಿಸಲಾಗುವ ಆಸ್ತಿ ತೆರಿಗೆ ಪಾವತಿ ಮೇಲಿನ 5% ರಿಯಾಯಿತಿ ಹಾಗೂ ವಿಳಂಬದ ಅವಧಿಗೆ ದಂಡ ವಿಧಿಸುವ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ 5% ರಿಯಾಯಿತಿ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಿ ಈ ಹಿಂದೆಯೇ ಆದೇಶ ಹೊರಡಿಸಲಾಗಿತ್ತು. ಇದೀಗ ಕೊರೋನಾ ಎರಡನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ಈ ಅವಧಿಯನ್ನು ಜು. 31 ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಆಸ್ತಿ ತೆರಿಗೆ ಪಾವತಿಸದೇ ಇರುವವರಿಗೆ ಜುಲೈ ತಿಂಗಳಿನಿಂದ ವಿಳಂಬದ ಅವಧಿಗೆ 2% ಗಳಷ್ಟು ದಂಡ ವಿಧಿಸಲಾಗುತ್ತದೆ. ಈ ಅವಧಿಯನ್ನು ಆಗಸ್ಟ್ 1 ರಿಂದ ಅನ್ವಯಿಸಲು ಕ್ರಮ ಕೈಗೊಳ್ಳುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.