News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊರೋನಾ‌ದಿಂದ ಮೃತಪಟ್ಟವರ ಕುಟುಂಬಕ್ಕೆ ನೆರವಾಗಲು ತಂಡ ರಚಿಸಿದ ಬಿಜೆಪಿ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದಿಂದ ಕುಟುಂಬದ ಸದಸ್ಯರ‌‌ನ್ನು ಕಳೆದುಕೊಂಡವರಿಗೆ ಸಾಂತ್ವನ ಹೇಳಲು, ನೆರವಾಗಲು ಬಿಜೆಪಿ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಶಾಸಕರು ಮತ್ತು ಸಚಿವರನ್ನೊಳಗೊಂಡ ತಂಡವನ್ನು ರಚನೆ ಮಾಡಲಾಗಿದೆ.

ತಂಡದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್ ಅಶೋಕ್, ಲಕ್ಷ್ಮಣ್ ಸವದಿ, ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್, ಡಾ ಕೆ ಸುಧಾಕರ್ ಮೊದಲಾದವರಿದ್ದಾರೆ‌. ಆರ್ ಅಶೋಕ್ ಅವರು ಕೊರೋನಾ‌ದಿಂದ ಮೃತಪಟ್ಟ ಕುಟುಂಬವೊಂದಕ್ಕೆ ಭೇಟಿ ನೀಡಿ ಅವರ ದುಃಖವನ್ನು ಆಲಿಸಿ, ಅವರಲ್ಲಿ ಧೈರ್ಯ ತುಂಬಿದ್ದಾರೆ.

ಈ ಸಂಬಂಧ ಮಾತನಾಡಿದ ಆರ್ ಅಶೋಕ್, ಯಾವುದೇ ಪಕ್ಷ, ಪಂಥಗಳ ಬೇಧ ಮರೆತು ಕೊರೋನಾ‌ದಿಂದ ಮೃತಪಟ್ಟವರ ಕುಟುಂಬಕ್ಕೆ ಭೇಟಿ ನೀಡಲಾಗುವುದು. ಆ ಮೂಲಕ ಅವರಲ್ಲಿ ಸಾಂತ್ವನ, ಧೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ. ಇದು ಪಕ್ಷದ ನಿರ್ಧಾರ‌ವಾಗಿದ್ದು ಮುಂದಿನ ದಿನಗಳಲ್ಲಿ ಹೆಚ್ಚು ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ತುಂಬುವುದಾಗಿ ತಿಳಿಸಿದ್ದಾರೆ.

Tags:

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top