ಬೆಂಗಳೂರು: ಉನ್ನತ ವ್ಯಾಸಾಂಗದ ಉದ್ದೇಶವನ್ನಿಟ್ಟುಕೊಂಡ ಸುಮಾರು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಮವಾರ ಘೋಷಿಸಿದ್ದರು. ಈ ಕಾರ್ಯಕ್ರಮವನ್ನು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಸಲಾಗಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹತ್ತು ಮಂದಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಿಸುವ ಮೂಲಕ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾಡೆಲ್ ಸ್ಮಾರ್ಟ್ ಕ್ಲಾಸ್ರೂಂ ಅನ್ನು ಸಿಎಂ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಕಾಲೇಜುಗಳನ್ನು ‘ಮರಳಿ ಕಾಲೇಜಿಗೆ’ ಎಂಬ ಘೋಷ ವಾಕ್ಯದಡಿ ಮತ್ತೆ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಕಾಲೇಜು ಆರಂಭದ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಕೊರೋನಾ ಹಿನ್ನೆಲೆಯಲ್ಲಿ ತಜ್ಞರ ತಂಡ ಮೂರನೇ ಅಲೆಯ ಎಚ್ಚರಿಕೆಯನ್ನು ಸಹ ಕೊಟ್ಟಿದೆ. ಹಾಗೆಯೇ ಅಧ್ಯಯನ ವರದಿಗಳನ್ನು ಸಹ ನೀಡಿದ್ದು, ಕಾಲೇಜುಗಳನ್ನು ಆರಂಭಿಸುವಂತೆಯೂ ಶಿಫಾರಸು ಮಾಡಿದೆ ಎಂದು ಹೇಳಿದ್ದಾರೆ.
ಹಾಗೆಯೇ 18 ವರ್ಷ ಮೇಲ್ಪಟ್ಟವರಿಗೆ ಸಹ ಕೊರೋನಾ ಲಸಿಕೆ ನೀಡುವ ಕೆಲಸವಾಗುತ್ತಿದೆ. ವಿದ್ಯಾರ್ಥಿಗಳನ್ನು ಆದ್ಯತಾ ವಲಯದಲ್ಲಿ ಗುರುತಿಸಿ ಲಸಿಕೆ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.