ಬೆಂಗಳೂರು: ಕೊರೋನಾ ಸೋಂಕಿನ ರೂಪಾಂತರ ಡೆಲ್ಟಾ ಪ್ಲಸ್ ವೈರಸ್ ರಾಜ್ಯದಲ್ಲಿಯೂ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ರಾಜ್ಯವನ್ನು ಕೊರೋನಾ ಮುಕ್ತವನ್ನಾಗಿಸುವ ನಿಟ್ವಿನಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ನೆರೆಯ ರಾಜ್ಯ ಕೇರಳದಲ್ಲಿ 12 ಸಾವಿರ ಸೋಂಕಿತರಿರುವುದರಿಂದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆಗೂ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಗಡಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಕೊರೋನಾ ಟೆಸ್ಟ್ ಮಾಡುವಂತೆಯೂ ಸೂಚಿಸಲಾಗಿದೆ. ಮಹಾರಾಷ್ಟ್ರ, ಕೇರಳ ಗಡಿಗಳಲ್ಲಿ ಅಧಿಕ ಪ್ರಮಾಣದಲ್ಲಿ ಕೊರೋನಾ ಟೆಸ್ಟ್ ನಡೆಸಬೇಕಿದೆ. ವಿಶೇಷವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಕೊರೋನಾ ಮೂರನೇ ಅಲೆಯ ಬಗ್ಗೆಯೂ ಮುಂಜಾಗ್ರತೆ ವಹಿಸುವಂತೆ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.