ಬೆಂಗಳೂರು: ಕೊರೋನಾ ಸೋಂಕಿತರಿಗೆ ಬ್ಲ್ಯಾಕ್ ಫಂಗಸ್ ಬಗ್ಗೆ ಸರಿಯಾದ ರೀತಿಯಲ್ಲಿ ಅರಿವು ಮೂಡಿಸಿ, ಆಸ್ಪತ್ರೆಗಳಲ್ಲಿನ ಬೆಡ್ ಮಾಹಿತಿಯ ಬಗ್ಗೆ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಕೊರೋನಾ ಸಂಬಂಧಿಸಿದಂತೆ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶವನ್ನು ನೀಡಿದೆ.
ಈ ಸಂದರ್ಭದಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿಡಲಾಗಿದೆ. ಈ ಸೋಂಕಿಗೆ ನೀಡಲಾಗುವ ದುಬಾರಿ ಚುಚ್ಚುಮದ್ದುಗಳನ್ನು ಸಹ ಉಚಿತವಾಗಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದೆ.
ಕಳೆದ ಒಂದು ವಾರದಲ್ಲಿ 100 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಈ ವರೆಗೆ ರಾಜ್ಯದಲ್ಲಿ ಒಟ್ಟು 3,086 ಪ್ರಕರಣ ಬೆಳಕಿಗೆ ಬಂದಿದೆ. 274 ಜನರು ಸಾವನ್ನಪ್ಪಿದ್ದಾರೆ. 2371 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.