ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ರಾಷ್ಟ್ರಪತಿಗಳ ವಿಶೇಷ ರೈಲಿನಲ್ಲಿ ಸಫ್ದರ್ಜಂಗ್ ರೈಲ್ವೆ ಸ್ಟೇಷನ್ ನಿಂದ ತಮ್ಮ ಹುಟ್ಟೂರು ಕಾನ್ಪುರಕ್ಕೆ ಪತ್ನಿಯ ಜೊತೆ ಪ್ರಯಾಣ ಬೆಳೆಸಿದ್ದಾರೆ.
ರಾಷ್ಟ್ರಪತಿಯನ್ನು ಬೀಳ್ಕೊಡಲು ರೈಲ್ವೆ ಸಚಿವ ಪಿಯೂಷ್ ಗೋಯಲ್, ರೈಲ್ವೆ ಮಂಡಳಿ ಮುಖ್ಯಸ್ಥೆ ಸುನೀತಾ ಶರ್ಮ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದರು.
ರಾಷ್ಟ್ರಪತಿಯೊಬ್ಬರು ರೈಲಿನಲ್ಲಿ ಪ್ರಯಾಣ ಬೆಳೆಸುತ್ತಿರುವುದು ಇದು ಎರಡನೇಯ ಬಾರಿ. 2006ರಲ್ಲಿ ರಾಷ್ಟ್ರಪತಿಯಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರು ಭಾರತೀಯ ಸೇನೆಯ ಪಾಸಿಂಗ್ ಔಟ್ ಪರೇಡ್ನಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಡೆಹರಾಡೂನ್ಗೆ ರೈಲಿನಲ್ಲಿ ಪ್ರಯಾಣ ಮಾಡಿದ್ದರು. ಇದೀಗ 15 ವರ್ಷಗಳ ಬಳಿಕ ರಾಷ್ಟ್ರಪತಿ ಕೋವಿಂದ್ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ.
ರಾಮನಾಥ್ ಅವರು ತಮ್ಮ ಹುಟ್ಟೂರಿನಲ್ಲಿ ತಾವು ಕಲಿತ ಶಾಲೆಗೆ ಭೇಟಿ ಕೊಡಲಿದ್ದಾರೆ. ಅಲ್ಲದೆ, ತಮ್ಮ ಶಾಲಾ ಸಹಪಾಠಿಗಳು ಮತ್ತು ಸಾಮಾಜಿಕ ಜೀವನದ ಆತ್ಮೀಯರನ್ನು ಭೇಟಿ ಮಾಡಲಿದ್ದಾರೆ.
President Kovind boards a special Presidential train from Safdarjung railway station to Kanpur. The train will make two stop-overs, at Jhinjhak and Rura of Kanpur Dehat, and will reach Kanpur Central in the evening. pic.twitter.com/ZuMpkGjqxP
— President of India (@rashtrapatibhvn) June 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.