ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಅಭಿವೃದ್ಧಿಯ ಬಗೆಗಿನ ವಿಷನ್ ಡಾಕ್ಯುಮೆಂಟ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು ನಡೆಯಲಿರುವ ವರ್ಚುವಲ್ ಸಭೆಯಲ್ಲಿ ಮಂಡಿಸಲಿದ್ದಾರೆ.
ಪಿಎಂ ಮೋದಿ ಮತ್ತು ಉತ್ತರ ಪ್ರದೇಶದ ಸಿಎಂ ಇಬ್ಬರೂ ಯುಪಿಯ ಇಬ್ಬರು ಉಪಮುಖ್ಯಮಂತ್ರಿಗಳೊಂದಿಗೆ ಅಭಿವೃದ್ಧಿಯ ವಿಷನ್ ಡಾಕ್ಯುಮೆಂಟ್ ದಾಖಲೆಯನ್ನು ಪರಿಶೀಲಿಸಲಿದ್ದಾರೆ.
ಅಯೋಧ್ಯೆಯ ಅಭಿವೃದ್ಧಿಯ ಭವಿಷ್ಯದ ದೃಷ್ಟಿಕೋನವು ಆಧುನೀಕರಣ, ರಸ್ತೆಗಳು, ಮೂಲಸೌಕರ್ಯ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ಮತ್ತು ಬಾಕಿ ಉಳಿದಿರುವ ಹಲವಾರು ಯೋಜನೆಗಳನ್ನು ಒಳಗೊಂಡಿದೆ.
ವರ್ಚುವಲ್ ರಿವ್ಯೂ ಮೀಟ್ನಲ್ಲಿ 1200 ಎಕರೆ ವಿಸ್ತೀರ್ಣದ ವೈದಿಕ ನಗರ ಮತ್ತು 84 ಕೋಸ್ ಪರಿಕ್ರಮ ಮಾರ್ಗದ ಬಗ್ಗೆ ಚರ್ಚೆ ನಡೆಯಲಿದ್ದು, ಇದು 300 ಕಿ.ಮೀ ಉದ್ದದ ಯಾತ್ರಾ ಮಾರ್ಗವಾಗಿದೆ.
ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ (ಎಡಿಎ) ಸಹಾಯದಿಂದ ರಾಜ್ಯ ಸರ್ಕಾರವು ನೇಮಕ ಮಾಡಿಕೊಂಡಿದ್ದ ಎಲ್ಇಎ ಅಸೋಸಿಯೇಟ್ಸ್ ಸೌತ್ ಏಷ್ಯಾ ಪ್ರೈವೇಟ್ ಲಿಮಿಟೆಡ್ ಸುಮಾರು 5000 ನಾಗರಿಕರು ಮತ್ತು 500 ಪ್ರವಾಸಿಗರ ಸಹಾಯದಿಂದ ವಿಷನ್ ಡಾಕ್ಯುಮೆಂಟ್ ಅನ್ನು ಸಿದ್ಧಪಡಿಸಿದೆ. ರಾಮ ಮಂದಿರ ನಿರರ್ಮಾಣವಾಗುತ್ತಿದ್ದಂತೆ ಯುಪಿ ನಗರದಲ್ಲಿ ನಾಲ್ಕು ಲಕ್ಷ ಉದ್ಯೋಗಗಳು ಮತ್ತು ಎಂಟು ಲಕ್ಷ ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ.
ಹೆಚ್ಚುವರಿಯಾಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಅಯೋಧ್ಯೆಯಲ್ಲಿ 65 ಕಿ.ಮೀ ಉದ್ದದ ರಿಂಗ್ ರಸ್ತೆಯನ್ನು ನಿರ್ಮಿಸುತ್ತಿದೆ. ಈ ರಿಂಗ್ ರಸ್ತೆಗೆ ಸುಮಾರು ರೂ. 2588 ಕೋಟಿ ರೂ.ವೆಚ್ಚವಾಗಲಿದೆ.
ಈ ವರ್ಷದ ಫೆಬ್ರವರಿಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಅನುಮೋದಿಸಿದೆ ಎಂದು ಹೇಳಿದ್ದಾರೆ.
“ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಯುಪಿ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಅನುಮೋದಿಸಿದೆ. ಜಿಲ್ಲಾ ಆಡಳಿತಕ್ಕೆ ರಾಜ್ಯ ಸರ್ಕಾರವು ಸುಮಾರು 1,000 ಕೋಟಿ ರೂ.ಗಳನ್ನು ಹಂಚಿಕೆಯನ್ನು ಮಾಡಿದೆ. ಕೇಂದ್ರ ಸರ್ಕಾರವು 250 ಕೋಟಿ ರೂ. ವಿತರಿಸಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.