ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕೊರೋನಾ ರೂಪಾಂತರ ವೈರಸ್ ಡೆಲ್ಟಾ ಪ್ಲಸ್ ನಿಯಂತ್ರಣದಲ್ಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಡೆಲ್ಟಾ ಪ್ಲಸ್ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿರುವ ಅವರು, ರಾಜ್ಯದಲ್ಲಿ ಸದ್ಯ ಡೆಲ್ಟಾ ಪ್ಲಸ್ ಹತೋಟಿಯಲ್ಲಿ ಇದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆಯೂ ಸೂಚಿಸಲಾಗಿದೆ. ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳಗಳ ಗಡಿ ಭಾಗಗಳಲ್ಲಿಯೂ ಹೆಚ್ಚು ನಿಗಾ ಇರಿಸುವಂತೆ ಸೂಚಿಸಲಾಗಿದೆ. ಹಾಗೆಯೇ ಕೊರೋನಾ ಟೆಸ್ಟ್ ನಡೆಸುವಂತೆಯೂ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ನೆರೆಯ ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆಯ ಆತಂಕ ಇನ್ನೂ ಕಡಿಮೆಯಾಗದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಜನರು ಎಚ್ಚರದಿಂದ ಇರುವಂತೆ ತಿಳಿಸಿದ್ದಾರೆ. ಹಾಗೆಯೇ ಅಪೌಷ್ಟಿಕತೆ ಸಮಸ್ಯೆ ಎದುರಿಸುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ನಿಗಾ ವಹಿಸಲು ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.