ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳ ನಿರಂತರ ಕಲಿಕೆಗೆ ಅನುಕೂಲವಾಗುವಂತೆ ಕಾರ್ಯಪಡೆಯನ್ನು ರಚಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಶಾಲೆಗಳು ಆರಂಭವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳು ಶಿಕ್ಷಣಕ್ಕೆ ವಿಮುಖರಾಗದಂತೆ, ಅವರಿಗೆ ನಿರಂತರ ಕಲಿಕೆಯನ್ನು ಹೇಗೆ ಕಾರ್ಯಸಾಧುವಾಗಿಸಬಹುದು ಎಂಬುದಾಗಿ ತಜ್ಞರ ಜೊತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದ್ದು, ಸಭೆಯಲ್ಲಿ ಕೇಳಿಬಂದ ಸಲಹೆಗಳನ್ನು ಆಧರಿಸಿ ಶಾಲೆಗಳ ಮರು ಆರಂಭದ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಲಹೆಗಳನ್ನು ಸಹ ಪಡೆದುಕೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಶಾಲೆಗಳಿಂದ ಮಕ್ಕಳನ್ನು ದೀರ್ಘ ಕಾಲದವರೆಗೆ ಹೊರಗುಳಿಯುವಂತೆ ಮಾಡುವುದು ಸಮಂಜಸವಲ್ಲ. ಶಾಲೆಗಳ ಆರಂಭ, ವಿದ್ಯಾಗಮ ಮುಂದುವರಿಕೆ ಮೊದಲಾದವುಗಳನ್ನು ಮಾಡುವಂತೆಯೂ ಸಾರ್ವಜನಿಕ ವಲಯದಿಂದ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.