ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ರೂಪಿಸಲಾದ ಎನ್ಡಿಪಿಎಸ್ ಕಾಯ್ದೆಗೆ ನಿಯಮಾವಳಿ ರೂಪಿಸುವ ಮೂಲಕ ಅದನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಾದಕ ವಸ್ತುಗಳ ವಿರುದ್ಧ ನಮ್ಮ ಹೋರಾಟ ವನ್ನು ಮತ್ತಷ್ಟು ಪ್ರಬಲಗೊಳಿಸುವ ನಿಟ್ಟಿನಲ್ಲಿ ಇದು ಪೂರಕವಾಗಿರಲಿದೆ. ಕೇಂದ್ರ ಸರ್ಕಾರ ಎನ್ಡಿಪಿಎಸ್ ಕಾನೂನು ರೂಪಿಸಿದೆ. ಈ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ರೂಪಿಸುವ ನಿಟ್ಟಿನಲ್ಲಿ ಈ ದೃಢ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಕಾನೂನಿನ ಅನ್ವಯವೇ ನಿಯಮ ರೂಪಿಸುವ ಸಂಬಂಧ ಅಧ್ಯಯನ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಡಾರ್ಕ್ ವೆಬ್ ಮೂಲಕ ಸರಬರಾಜು ಆಗುತ್ತಿದ್ದ ಮಾದಕ ವಸ್ತುಗಳನ್ನು ಪೊಲೀಸ್ ಇಲಾಖೆ ನಿಯಂತ್ರಣ ಮಾಡಿದೆ. ಡಾರ್ಕ್ ವೆಬ್ ಆಧಾರದ ಮೇಲೆ ಹಲವು ದಾಳಿಯನ್ನು ನಡೆಸಲಾಗಿದ್ದು, ಹಲವು ಅಪರಾಧ ಪತ್ತೆಯಾಗಿದೆ. ಅಂತರಾಷ್ಟ್ರೀಯ ಮಟ್ಟದ ಪ್ಲೇಯರ್ಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.