ಉಡುಪಿ: ಕೊರೋನಾ ಮೂರನೇ ಅಲೆಯ ಮುನ್ನೆಚ್ಚರಿಕೆಯಾಗಿ ಉಡುಪಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಐಸಿಯು ವಾರ್ಡ್ ನಿರ್ಮಾಣ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಘಟಕಗಳನ್ನು ಮಂಗಳೂರಿನಿಂದ ಉಡುಪಿಗೆ ಸ್ಥಳಾಂತರ ಮಾಡುವುದಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಣಯಗಳನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೆಗೆದುಕೊಳ್ಳಲಾಯಿತು.
ಜಿಲ್ಲೆಯಲ್ಲಿ ಪ್ರತಿನಿತ್ಯ 10 ಸಾವಿರ ಡೋಸ್ ಲಸಿಕೆ ವಿತರಣೆ, ಮಕ್ಕಳ ಆರೋಗ್ಯ ತಪಾಸಣೆಯಲ್ಲಿ ಸೂಕ್ತ ಚಿಕಿತ್ಸೆಗೆ ಕ್ರಮ, ಉಡುಪಿಯ ಹಾಜಿ ಅಬ್ದಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮತ್ತೆ ಸರ್ಕಾರದ ವಶಕಿ ಪಡೆಯುವ ಸಂಬಂಧವೂ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಹಾಗೆಯೇ ಸಿಎಸ್ಆರ್ ನಿಧಿಯಡಿ ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿ, ಅದನ್ನು ಜುಲೈ ಅಂತ್ಯದೊಳಗೆ ಆರಂಭಿಸುವಂತೆಯೂ ಸೂಚಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 30 ಮತ್ತು ತಾಲೂಕು ಆಸ್ಪತ್ರೆಯಲ್ಲಿ ತಲಾ 10 ರಂತೆ ಐಸಿಯು ಹಾಸಿಗೆಗಳನ್ನು ಅಭಿವೃದ್ಧಿ ಮಾಡಬೇಕು. ಕನಿಷ್ಠ 5 ಮಕ್ಕಳ ಹಾಸಿಗೆ ಇರಬೇಕು. ಈ ಎಲ್ಲಾ ಕೆಲಸಗಳನ್ನು ಮುಂದಿನ 2 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.