ಬೆಂಗಳೂರು: ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಡಾ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ರಾಜ್ಯದಲ್ಲಿ 11 ಲಕ್ಷ ಸಸಿಗಳನ್ನು ನೆಡುವುದಕ್ಕೆ ಬಿಜೆಪಿ ಯೋಜನೆ ರೂಪಿಸಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಡಾ ಶ್ಯಾಮ್ ಪ್ರಸಾದ್ ಮುಖರ್ಜಿ ಜಯಂತಿ ಪ್ರಯುಕ್ತ ಬೆಂಗಳೂರು ಬಿಜೆಪಿ ನಗರ ಕಚೇರಿಯಲ್ಲಿ ಬೀಜದ ಉಂಡೆ ತಯಾರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಕ್ಷದ ಯುವಮೋರ್ಚಾ ಕಾರ್ಯಕರ್ತರು ಬೀಜದ ಉಂಡೆಗಳನ್ನು ತಯಾರಿಸುತ್ತಿದ್ದಾರೆ. ರಾಜ್ಯದೆಲ್ಲೆಡೆ ಈ ಕಾರ್ಯ ಚೈತನ್ಯಪೂರ್ಣವಾಗಿ ನಡೆಯುತ್ತಿದೆ ಎಂದು ಅವರು ಹೇಳಿದರು. ಎಲ್ಲೆಲ್ಲಿ ಗಿಡ ನೆಡಬೇಕು ಎಂಬುದಾಗಿ ಜಾಗಗಳನ್ನು ಗುರುತು ಮಾಡಿ, ಅವುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಆರೈಕೆ ಮಾಡುವ ಕೆಲಸಕ್ಕೂ ಪೂರಕ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಪರಿಸರ ವಿಷಯವನ್ನು ಈ ವರ್ಷದಿಂದಲೇ ವಿಶೇಷ ಒತ್ತು ನೀಡಿ ಬೋಧಿಸಲಾಗುವುದು ಎಂದು ಅವರು ಹೇಳಿದ್ದಾರೆ. ಭಾರತದಲ್ಲಿ ಕೈಗಾರಿಕೆಗಳು ಹೆಚ್ಚುತ್ತಿದ್ದು, ಅದಕ್ಕೆ ಪೂರಕವಾಗಿ ಹಸಿರು ಬೆಳೆಸಲಾಗುತ್ತದೆ. ಪ್ರಧಾನಿ ಮೋದಿ ಅವರು ಜಾಗತಿಕ ಹವಾಮಾನದ ವಿಚಾರದಲ್ಲೂ ನಾಯಕನಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ 7 ವರ್ಷಗಳಿಂದ ಭಾರತದಲ್ಲಿ ಅರಣ್ಯ ಪ್ರಮಾಣ ಸಹ ಏರಿಕೆ ಮಾಡಲಾಗಿದೆ. ಜೊತೆಗೆ ವನ್ಯಜೀವಿ ರಕ್ಷಣೆಗೂ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಪಕ್ಷವೂ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.