ಬೆಂಗಳೂರು: ವಿಶ್ವ ಸಂಸ್ಥೆ ನಿಗದಿ ಮಾಡಿರುವ ಸುಸ್ಥಿರ ಅಭಿವೃದ್ಧಿ ಗುರಿಗಳು -2030 ರ ಸಾಧನೆಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಅವರು ನೀತಿ ಆಯೋಗದ ಪ್ರತಿನಿಧಿಗಳ ಜೊತೆಗೆ ಚರ್ಚೆ ನಡೆಸಿದರು.
ಎಸ್ಜಿಡಿಯಲ್ಲಿ ರಾಜ್ಯದ ಅಂಕ ಹಾಗೂ ಸ್ಥಾನದಲ್ಲಿ ಗಣನೀಯ ಸುಧಾರಣೆಯಾಗಿರುವ ಬಗ್ಗೆ ನೀತಿ ಆಯೋಗದ ಅಧಿಕಾರಿಗಳು ತೃಪ್ತಿ ವ್ಯಕ್ತಪಡಿಸಿದರು. ಹಾಗೆಯೇ ಮುಂದಿನ ದಿನಗಳಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೇರಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ರಾಜ್ಯದಲ್ಲಿನ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರ, ಲಿಂಗ ಸಮಾನತೆ, ವಸತಿ, ಶಿಕ್ಷಣ. ಮೊದಲಾದ ವಿಚಾರದ ಬಗ್ಗೆ ಮತ್ತಷ್ಟು ಗಮನ ನೀಡುವಂತೆಯೂ ಆಯೋಗ ಸರ್ಕಾರಕ್ಕೆ ಸೂಚಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಈಗಾಗಲೇ ಆಯವ್ಯಯದಲ್ಲಿ ರಾಜ್ಯದ ಎಲ್ಲಾ ಯೋಜನೆಗಳು ಎಸ್ ಡಿ ಜಿ ಗುರಿ ಸಾಧನೆಯನ್ನು ಕೇಂದ್ರೀಕರಿಸಿ ಅನುಷ್ಠಾನಗೊಳಿಸುವುದಾಗಿ ಘೋಷಿಸಲಾಗಿದೆ. ಅದರಂತೆಯೇ ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಲಿದೆ ಎಂದು ಹೇಳಿದರು. ಕೃಷಿ, ತೋಟಗಾರಿಕೆ, ಜಲಸಂಪನ್ಮೂಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ, ವಾಣಿಜ್ಯ ಮತ್ತು ಕೈಗಾರಿಕೆ, ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಹೊಸ ಕ್ರಮವನ್ನು ಜಾರಿಗೆ ತರಲಾಗುತ್ತಿದೆ. ಇದು ರಾಜ್ಯದ ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮದಲ್ಲಿ ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆಯ ವತಿಯಿಂದ ಹೊರತಂದಿರುವ, ರಾಜ್ಯದಲ್ಲಿ ಅನುಷ್ಠಾನಗೊಂಡಿರುವ 20 ಅತ್ಯುತ್ತಮ ಆಚರಣೆಗಳ ಕುರಿತ ಕೈಪಿಡಿಯನ್ನು ಸಿಎಂ ಬಿಎಸ್ವೈ ಬಿಡುಗಡೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.