ನವದೆಹಲಿ: ವಿದ್ಯುತ್ ವಿತರಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ 3.03 ಲಕ್ಷ ಕೋಟಿ ರೂ. ಮೊತ್ತದ ಯೋಜನೆಯೊಂದಕ್ಕೆ ಕೇಂದ್ರದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ.
ಈ ಸಂಬಂಧ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್ ಕೆ ಸಿಂಗ್ ಮಾತನಾಡಿದ್ದು, ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ನೂತನ ಯೋಜನೆಗೆ ಅನುಮೋದಿಸಲಾಗಿದೆ. ಡಿಸ್ಕಾಮ್ಸ್ ಕಂಪೆನಿಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಮತ್ತು ವ್ಯವಸ್ಥೆಯನ್ನು ಬಲಪಡಿಸುವ, ಹಣಕಾಸು ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವ ಪಡೆದಿದೆ ಎಂದು ಹೇಳಿದ್ದಾರೆ.
ಇದರಲ್ಲಿ ಕೃಷಿ ಕ್ಷೇತ್ರಕ್ಕೆ ಸಮರ್ಪಕ ವಿದ್ಯುತ್ ಪೂರೈಕೆ, ಸೌರಶಕ್ತಿ ಮುಖೇನ ಹಗಲು ಹೊತ್ತಿನಲ್ಲಿ ರೈತರಿಗೆ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಈ ಮೊತ್ತವನ್ನು ಷರತ್ತಿನನ್ವಯ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಹಾಗೆಯೇ 25 ಕೋಟಿ ಸ್ಮಾರ್ಟ್ ಮೀಟರ್ಗಳ ಅಳವಡಿಕೆ, 10 ಸಾವಿರ. ಫೀಡರ್ಗಳ ಸ್ಥಾಪನೆ ಮೊದಲಾದವುಗಳನ್ನು ಸಹ ಈ ಯೋಜನೆಯ ಮೂಲಕ ಸ್ಥಾಪಿಸುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.