ಬೆಂಗಳೂರು: ಕೊರೋನಾ ಸೋಂಕಿನ ವಿರುದ್ಧ ಇಡೀ ದೇಶದಲ್ಲಿಯೇ ಲಸಿಕಾ ಅಭಿಯಾನ ನಡೆಯುತ್ತಿದ್ದು, ಲಸಿಕಾ ಅಭಿಯಾನದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮಹತ್ವದ ಮೈಲಿಗಲ್ಲು ಸಾಧಿಸಿದೆ.
ರಾಜ್ಯದ ಆರೋಗ್ಯ ಇಲಾಖೆಯ ಮಾಹಿತಿಯಂತೆ ಬುಧವಾರದವರೆಗೆ ಬೆಂಗಳೂರಿನಲ್ಲಿ 61,43,456 ಡೋಸ್ ಲಸಿಕೆಗಳನ್ನು ನೀಡಲಾಗಿದ್ದು, ದೇಶದಲ್ಲೇ ಅತೀ ಹೆಚ್ಚು ಲಸಿಕೆಗಳನ್ನು ನೀಡಿದ ಮೆಟ್ರೋ ನಗರಗಳ ಪೈಕಿ ಬೆಂಗಳೂರು 2 ನೇ ಗರಿಷ್ಠ ಪ್ರಮಾಣದ ಲಸಿಕೆ ನೀಡಿ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಮೊದಲನೇ ಸ್ಥಾನದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಇದ್ದು, ಮೂರನೇ ಸ್ಥಾನಕ್ಕೆ ಮುಂಬೈ ತೃಪ್ತಿಪಟ್ಟುಕೊಂಡಿದೆ.
ಬೆಂಗಳೂರು ನಗರದಲ್ಲಿ ಜನರೇ ಸ್ವ ಇಚ್ಛೆಯಿಂದ ಲಸಿಕೆ ಪಡೆಯಲು ಮುಂದಾಗುತೊತಿದ್ದು, ಲಸಿಕೆ ವಿತರಣೆಯ ವೇಗ ಹೆಚ್ಚಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಈ ವರೆಗೆ ನಗರದಲ್ಲಿ 51.3 ಲಕ್ಷ ಜನರು ಮೊದಲ ಡೋಸ್ ಲಸಿಕೆ ಪಡೆದಿದ್ದು, 9.3 ಲಕ್ಷ ಜನರಿಗೆ ಎರಡನೇ ಡೋಸ್ ಲಸಿಕೆ ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.