ನವದೆಹಲಿ: ಸುಲಭವಾಗಿ ಡ್ರೋನ್ಗಳು ಲಭ್ಯವಾಗುವ ಹಿನ್ನೆಲೆಯಲ್ಲಿ ಭದ್ರತಾ ಸವಾಲು ಬಹಳ ಕಠಿಣವಾಗುತ್ತಿದೆ. ಆದರೆ ಭಾರತೀಯ ಸೇನೆ ಈ ಎಲ್ಲಾ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಸಾಮರ್ಥ್ಯ ಹೆಚ್ಚಿಸಿಕೊಳ್ಳುತ್ತಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ತಿಳಿಸಿದ್ದಾರೆ.
ಸವಾಲುಗಳಿಗೆ ಸಂಬಂಧಿಸಿದಂತೆ ಭದ್ರತಾ ಪಡೆಗಳಿಗೆ ಸಂಪೂರ್ಣ ಅರಿವಿದೆ. ಅವುಗಳನ್ನು ಎದುರಿಸಲು ಹಲವು ಉಪಕ್ರಮಗಳನ್ನು ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಪ್ರತ್ಯಕ್ಷ ಮತ್ತು ಪರೋಕ್ಷ ದಾಳಿಗಳನ್ನು ಸಮರ್ಥವಾಗಿ ಎದುರಿಸಲು ನಾವು ನಮ್ಮ ಸಾಮರ್ಥ್ಯ ವೃದ್ಧಿಸಿಕೊಳ್ಳುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಫೆಬ್ರವರಿ ತಿಂಗಳಲ್ಲಿ ಭಾರತ ಮತ್ತು ಶತ್ರು ರಾಷ್ಟ್ರ ಪಾಕಿಸ್ಥಾನದ ನಡುವೆ ಕದನ ವಿರಾಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಆ ಬಳಿಕ ಒಳನುಸುಳುವಿಕೆ ನಡೆದಿಲ್ಲ. ಇದರಿಂದ ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಕಡಿಮೆಯಾಗಿದೆ. ಭಯೋತ್ಪಾದನೆ ಚಟುವಟಿಕೆಗಳೂ ಕಡಿಮೆಯಾಗಿವೆ ಎಂದು ಹೇಳಿದ್ದಾರೆ. ಆದರೂ ಶಾಂತಿ ಮತ್ತು ಅಭಿವೃದ್ಧಿ ಕುಂಠಿತ ಮಾಡಲು ಕೆಲ ಶಕ್ತಿಗಳು ಕಾಯುತ್ತಿರುತ್ತವೆ. ಅದನ್ನು ನಾವು ಎದುರಿಸಬೇಕಾಗುತ್ತದೆ. ಶಾಂತಿ ಮತ್ತು ನಿರಾತಂಕವಾದ ವಾತಾವರಣ ನಿರ್ಮಾಣಕ್ಕೆ ನಮ್ಮ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.