ಬೆಂಗಳೂರು: ರಾಜ್ಯದಲ್ಲಿ ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಕ್ಕೆ ಅರ್ಹತಾ ಪರೀಕ್ಷೆ KARTET-2021 ಆಗಸ್ಟ್ 22 ರಂದು ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಒಂದರಿಂದ ಐದನೇ ತರಗತಿಗೆ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಕೆ ಮಾಡುವವರಿಗೆ ಪಿಯುಸಿ ಮತ್ತು ಡಿಇಡಿ ಉತ್ತೀರ್ಣರಾಗಿರಬೇಕು. ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಪದವಿ ಮತ್ತು ಡಿಇಡಿ , ಪದವಿ ಬಿಇಡಿ/ಬಿಎಡಿ/ ಬಿಎಸ್ಸಿಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆಯ ವರ್ಷದ ಡಿಇಡಿ, ಬಿಇಡಿ, ಬಿಎಇಡಿ, ಬಿಎಸ್ಸಿಇಡಿ ಪರೀಕ್ಷೆ ಮುಗಿಸಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಜುಲೈ 20 ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆ. 22 ರಿಂದ 9.30 – 12 ರ ವರೆಗೆ ಮಧ್ಯಾಹ್ನ 2 ಗಂಟೆಯಿಂದ 4.30 ರ ವರೆಗೆ ಪರೀಕ್ಷೆ ನಡೆಯಲಿದೆ. 150 ಅಂಕಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರಗಳನ್ನು ಆ. 12 ರಿಂದ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.