ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ದಾಳಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ರಾಜ್ಪೋರಾ ಗ್ರಾಮದಲ್ಲಿ ಗುರುವಾರ ರಾತ್ರಿಯಿಂದಲೇ ಈ ಗುಂಡಿನ ಕಾಳಗ ಆರಂಭವಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ಪ್ರದೇಶದಲ್ಲಿ ಮೂರರಿಂದ ನಾಲ್ಕು ಮಂದಿ ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ದೊರೆತಿದ್ದು, ಈ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.
ಭದ್ರತಾ ಪಡೆಗಳು ಉಗ್ರರಿದ್ದ ಸ್ಥಳವನ್ನು ಸುತ್ತುವರಿದು ಕಾರ್ಯಾಚರಣೆ ಆರಂಭಿಸಿದ ಸಂದರ್ಭದಲ್ಲಿ ಉಗ್ರರು ಯೋಧರತ್ತ ಗುಂಡು ಹಾರಿಸಲು ಆರಂಭಿಸಿದ್ದಾರೆ. ಇದಕ್ಕೆ ಸೇನೆ ಪ್ರತಿ ದಾಳಿ ನಡೆಸಿ ಪ್ರತ್ಯುತ್ತರ ನೀಡುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ದಾಳಿಯಲ್ಲಿ ಯೋಧರೋರ್ವರು ಹುತಾತ್ಮರಾಗಿದ್ದು, ನಾಲ್ವರು ಉಗ್ರರು ಸೆರೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.