ನವದೆಹಲಿ: ದೇಶದಲ್ಲಿ ಆರೋಗ್ಯ ವಿಚಾರಕ್ಕೆ ಹೆಚ್ಚು ಒತ್ತು ನೀಡಲು ವೈದ್ಯಕೀಯ ಮೂಲಸೌಕರ್ಯ ಹೆಚ್ಚಿಸಲಾಗಿದೆ. ಕೊರೋನಾ ಮೂರನೇ ಅಲೆ ನಿಭಾಯಿಸಲು ಅದು ಸನ್ನದ್ಧವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಇಂಡಿಯಾ ಗ್ಲೋಬಲ್ ಫೋರಂ ನಲ್ಲಿ ಮಾತನಾಡಿದ ಅವರು, ಆದಾಯ ಸಂಗ್ರಹದಲ್ಲಿನ ಅಭಿವೃದ್ಧಿ, ವೈದ್ಯಕೀಯ ಮೂಲಸೌಕರ್ಯ ಹೆಚ್ಚಳಕ್ಕೆ ನೆರವಾಗಲಿದೆ. ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ಜೊತೆಗೆ, ಸರ್ಕಾರದ ಯೋಜಿತ ಖಾಸಗೀಕರಣಕ್ಕೆ ಚಾಲನೆ ಪ್ರಕ್ರಿಯೆ ಸಹ ಸಹಜವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಮೂರನೇ ಅಲೆಯ ಸಂಭಾವ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ವೈದ್ಯಕೀಯ ಮೂಲಸೌಕರ್ಯ ಹೆಚ್ಚಳಕ್ಕೆ ಮುಂದಾಗಿದೆ. ಮೆಟ್ರೋಪಾಲಿಟನ್ ಸಿಟಿಗಳ ಜೊತೆಗೆ ಎರಡು ಮತ್ತು ಮೂರನೇ ಶ್ರೇಣಿಯ ನಗರಗಳಲ್ಲಿಯೂ ವೈದ್ಯಕೀಯ ಮೂಲಸೌಕರ್ಯ ಸುಧಾರಣೆಗೆ ವಿಭಿನ್ನ ಪ್ರಯತ್ನ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. ಜನಸಂಖ್ಯೆ ಮತ್ತು ಮಕ್ಕಳ ಸಂಖ್ಯೆ ಗಮನದಲ್ಲಿಟ್ಟುಕೊಂಡು ಮೂಲಸೌಕರ್ಯಗಳನ್ನು ಏರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.