ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದೆ. ಆದರೆ ಕೆಲ ರಾಜ್ಯಗಳಲ್ಲಿ ಸೋಂಕು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆರು ರಾಜ್ಯಗಳಿಗೆ ಕೊರೋನಾ ರಕ್ಷಣಾ ಪಡೆಗಳನ್ನು ಕೇಂದ್ರ ಸರ್ಕಾರ ರವಾನಿಸಿದೆ.
ಕೊರೋನಾ ನಿಯಂತ್ರಣ ಮತ್ತು ಧಾರಕ ಕ್ರಮಗಳಿಗಾಗಿ ಕೇಂದ್ರ ಸರ್ಕಾರ ತಂಡಗಳನ್ನು ರಚಿಸಿದೆ. ಈ ತಂಡಗಳನ್ನು ಕೇರಳ, ಅರುಣಾಚಲ ಪ್ರದೇಶ, ತ್ರಿಪುರ, ಒಡಿಶಾ, ಚತ್ತೀಸ್ಘಡ, ಮಣಿಪುರಕ್ಕೆ ವಿಶೇಷ ತಂಡಗಳನ್ನು ಕಳುಹಿಸುತ್ತಿದೆ. ದೇಶದಲ್ಲಿ ಅತೀ ಹೆಚ್ಚು ಸೋಂಕಿತರನ್ನು ಹೊಂದಿದ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ, ಕೇರಳ, ಕರ್ನಾಟಕಗಳು ಅಗ್ರಸ್ಥಾನದಲ್ಲಿದ್ದು, ಈ ಪೈಕಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಸೋಂಕು ಗಣನೀಯವಾಗಿ ಕುಸಿತವಾಗಿದೆ. ಆದರೆ ಕೇರಳದಲ್ಲಿ ಸೋಂಕು ಏರಿಕೆಯಾಗುತ್ತಿದೆ. ಹೀಗಾಗಿ ಆರು ರಾಜ್ಯಗಳಿಗೆ ತಂಡ ರವಾನಿಸಿರುವುದಾಗಿ ಸರ್ಕಾರ ತಿಳಿಸಿದೆ.
ಈ ತಂಡಗಳು ರಾಜ್ಯಗಳಲ್ಲಿನ ಕೊರೋನಾ ಪರಿಸ್ಥಿತಿ ಅವಲೋಕನ ನಡೆಸಿ, ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿವೆ ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.