ನವದೆಹಲಿ: ಲಸಿಕೆ ಲಭ್ಯತೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ಗೆ ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಸಿಕೆ ಲಭ್ಯತೆಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಹರ್ಷವರ್ಧನ್ ಅವರು, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಓದಲು ಬರುವುದಿಲ್ಲವೇ’ ಎಂದು ಕೇಳಿದ್ದಾರೆ.
ಜುಲೈ ತಿಂಗಳ ಲಸಿಕೆ ಲಭ್ಯತೆಗೆ ಸಂಬಂಧಿಸಿದಂತೆ ಅಂಕಿ ಅಂಶಗಳನ್ನು ನಿನ್ನೆಯಷ್ಟೇ ಬಹಿರಂಗ ಮಾಡಲಾಗಿದೆ. ರಾಹುಲ್ ಗಾಂಧಿ ಅವರ ಸಮಸ್ಯೆ ಏನು? ಅವರಿಗೆ ಓದಲು ಬರುವುದಿಲ್ಲವೇ? ಅವರಿಗೆ ಅರ್ಥವಾಗುವುದಿಲ್ಲವೇ? ಎಂದು ಕೇಳಿದ್ದಾರೆ. ಹಾಗೆಯೇ ಅಹಂಕಾರ ಮತ್ತು ನಿರ್ಲಕ್ಷ್ಯವೆಂಬ ವೈರಸ್ಗೆ ಲಸಿಕೆ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಜೊತೆಗೆ ಲಸಿಕಾ ಅಭಿಯಾನಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರು ಸಲಹೆ ನೀಡಿರುವುದನ್ನು ಉಲ್ಲೇಖಿಸಿರುವ ಅವರು, ನಿಮ್ಮ ರಚನಾತ್ಮಕ ಸಹಕಾರ, ಸಲಹೆಗಳನ್ನು ಇಂತಹ ಸಂಕಷ್ಟದ ಸಂದರ್ಭದಲ್ಲಿ ಇತರ ಕಾಂಗ್ರೆಸ್ ನಾಯಕರೂ ಪಾಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Just yesterday, I put out facts on vaccine availability for the month of July.
What is @RahulGandhi Ji’s problem ?Does he not read ?
Does he not understand ?There is no vaccine for the virus of arrogance and ignorance !!@INCIndia must think of a leadership overhaul ! https://t.co/jFX60jM15w
— Dr Harsh Vardhan (@drharshvardhan) July 2, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.