ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷ 2021 ರ ಮೊದಲ ತ್ರೈಮಾಸಿಕದಲ್ಲಿ ಭಾರತ ಅತ್ಯಧಿಕ ರಫ್ತು ಕಂಡಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಒಟ್ಟು ರಫ್ತುಗಳನ್ನು 95 ಬಿಲಿಯನ್ ಎಂದು ಅಂದಾಜಿಸಲಾಗಿದೆ. ಇದು ಆರ್ಥಿಕ ವರ್ಷ 2018 – 19 ರಲ್ಲಿ ಮೊದಲ ತ್ರೈಮಾಸಿಕದ ರಫ್ತಿಗೆ ಹೋಲಿಕೆ ಮಾಡಿದಲ್ಲಿ 16% ಏರಿಕೆಯಾಗಿದೆ. ಆ ಸಂದರ್ಭದಲ್ಲಿ ಅದು 82 ಬಿಲಿಯನ್ ಆಗಿತ್ತು. 2020 ರಲ್ಲಿ 90 ಬಿಲಿಯನ್ ದಾಟಿತ್ತು ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ಉದ್ಯಮ ಕ್ಷೇತ್ರಗಳ ಚೇತರಿಕೆಯ ಬಗೆಗೂ ಭರವಸೆ ನೀಡಿದ್ದಾರೆ. ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿಯೂ ದೇಶದ ಆರ್ಥಿಕತೆ ಚೇತರಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ದೇಶದ ವೈದ್ಯಕೀಯ ಮತ್ತು ಆರ್ಥಿಕ ಮೂಲಸೌಕರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಎಫ್ಡಿಐ ಮತ್ತು ರಾಷ್ಟ್ರದ ರಫ್ತು ಏರಿಕೆ ಕಂಡಿದೆ ಎಂದು ತಿಳಿಸಿದ್ದಾರೆ.
2020- 21 ರ ವೇಳೆ ಎಫ್ಡಿಐ ಒಳಹರಿವು 81.72 ಬಿಲಿಯನ್ ಆಗಿದ್ದರೆ, 2021 ರ ಎಪ್ರಿಲ್ನಲ್ಲಿ ಎಫ್ಡಿಐ ಒಳಹರಿವು 6.24 ಬಿಲಿಯನ್ ಆಗಿದ್ದು, ಇದು ಎಪ್ರಿಲ್ 2020 ಕ್ಕೆ ಹೋಲಿಕೆ ಮಾಡಿದಲ್ಲಿ 38% ಗಳಷ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.