ನವದೆಹಲಿ: ಹೈದರಾಬಾದ್ನ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿ ಮಾಡಿರುವ ಕೋವ್ಯಾಕ್ಸಿನ್ ಲಸಿಕೆ 77.8% ಗಳಷ್ಟು ಪರಿಣಾಮಕಾರಿ ಎಂದು ಮೂರನೇ ಹಂತದ ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ.
ಈ ಸಂಬಂಧ ಸಂಸ್ಥೆ ಟ್ವೀಟ್ ಮಾಡಿದ್ದು, ಕೋವ್ಯಾಕ್ಸಿನ್ ಲಸಿಕೆ ಸುರಕ್ಷಿತವಾಗಿದೆ ಎಂದು ಸಾಬೀತಾಗಿದೆ. ಭಾರತದಲ್ಲಿ ಇದನ್ನು ಸುದೀರ್ಘ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ ಕೋವ್ಯಾಕ್ಸಿನ್ ಯಶಸ್ಸು ಸಾಧಿಸಿದೆ ಎಂದು ಹೇಳಿದೆ.
2020 ರ ನವೆಂಬರ್ನಿಂದ ಜನವರಿ 2021 ರ ನಡುವೆ ಸುಮಾರು 25 ಸಾವಿರಕ್ಕೂ ಅಧಿಕ ಜನರಿಗೆ ಕೋವ್ಯಾಕ್ಸಿನ್ ನೀಡಲಾಗಿದೆ. ಸೋಂಕಿನ ಲಕ್ಷಣಗಳು ಇರುವವರಲ್ಲಿ ಈ ಲಸಿಕೆ 77.8% ಪರಿಣಾಮಕಾರಿಯಾಗಿದೆ. ತೀವ್ರ ಸೋಂಕಿನ ಲಕ್ಷಣಗಳನ್ನು ಹೊಂದಿದವರಲ್ಲಿ ಇದು 93.4% ಪರಿಣಾಮ ಬೀರಿದೆ ಎಂದು ತಿಳಿಸಿದೆ.
COVAXIN® Proven SAFE in India's Largest Efficacy Trial. Final Phase-3 Pre-Print Data Published on https://t.co/JJh9n3aB6V pic.twitter.com/AhnEg56vFN
— Bharat Biotech (@BharatBiotech) July 2, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.