ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಸಂಪೂರ್ಣ ನಿಯಂತ್ರಣವಾಗಿಲ್ಲ. ಈ ಹಿನ್ನೆಲೆಯಲ್ಲಿ ಜನತೆ ಕೊಂಚ ಎಚ್ಚರ ತಪ್ಪಿದರೂ ಮೂರನೇ ಬಾರಿಗೆ ಲಾಕ್ಡೌನ್ ಮಾಡಬೇಕಾದ ಅನಿವಾರ್ಯತೆ ಖಂಡಿತವಾಗಿಯೂ ಸೃಷ್ಟಿಯಾಗಲಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಕೊರೋನಾ ಒಂದನೇ ಅಲೆ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಈಗಾಗಲೇ ವರ್ಷಗಳ ಅಂತರದಲ್ಲಿಯೇ ಎರಡು ಬಾರಿ ಲಾಕ್ಡೌನ್ ಮಾಡಲಾಗಿದೆ. ಇದೀಗ ಮೂರನೇ ಅಲೆಯ ಎಚ್ಚರಿಕೆಯನ್ನೂ ತಜ್ಞರು ನೀಡಿದ್ದಾರೆ. ಈಗಷ್ಟೇ ಅನ್ಲಾಕ್ ಆಗುತ್ತಿದ್ದು, ಎಚ್ಚರ ತಪ್ಪಿದಲ್ಲಿ ಮತ್ತೆ ಲಾಕ್ಡೌನ್ ಮಾಡಬೇಕಾಗಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಂದಿನಿಂದ ತೊಡಗಿದಂತೆ ರಾಜ್ಯದಲ್ಲಿ ಹೆಚ್ಚಿನ ನಿರ್ಬಂಧಗಳು ತೆರವಾಗಲಿವೆ. ಆದರೆ ಜನತೆ ಮೈಮರೆಯಬಾರದು. ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ನಿತ್ಯ 10 ಸಾವಿರಕ್ಕೂ ಅಧಿಕ ಸೋಂಕಿತರ ಪ್ರಕರಣ ದಾಖಲಾಗುತ್ತಿವೆ. ಡೆಲ್ಟಾ ಪ್ರಕರಣಗಳೂ ಸದ್ದು ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಎಚ್ಚರ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.