ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳನ್ನು ಸಹ ಪರೀಕ್ಷೆ ಇಲ್ಲದೆಯೇ ಉತ್ತೀರ್ಣಗೊಳಿಸುವುದಾಗಿ ಹೈಕೋರ್ಟ್ಗೆ ಸರ್ಕಾರ ತಿಳಿಸಿದೆ.
ಈ ಸಂಬಂಧ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪರಿಶೀಲನೆ ನಡೆಸಿದ ಕೋರ್ಟ್ನ ವಿಭಾಗೀಯ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರ ಪರೀಕ್ಷೆ ಬರೆಯಲಿರುವ ಪುನರಾವರ್ತಿತ ಅಭ್ಯರ್ಥಿಗಳನ್ನು ಸಹ ಉತ್ತೀರ್ಣಗೊಳಿಸಲಾಗುವುದು ಎಂದು ತಿಳಿಸಿದೆ.
35% ಅಂಕಗಳನ್ನು ನೀಡುವ ಮೂಲಕ ಅವರನ್ನು ಉತ್ತೀರ್ಣಗೊಳಿಸಲಾಗುವುದು. ಈ ಬಾರಿ ರಾಜ್ಯದಲ್ಲಿ 76 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬಯಸಿದ್ದರೆಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.