ನವದೆಹಲಿ: ‘ಸಹಕಾರ್ ಸೆ ಸಮೃದ್ಧಿ’ ಎಂಬ ದೃಷ್ಟಿಕೋನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಸರ್ಕಾರ ಐತಿಹಾಸಿಕ ನಿರ್ಣಯವೊಂದನ್ನು ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂತನವಾಗಿ ಸಹಕಾರ ಸಚಿವಾಲಯವನ್ನು ರಚನೆ ಮಾಡಿದೆ.
ಇದು ದೇಶದಲ್ಲಿ ಸಹಕಾರಿ ಆಂದೋಲನವನ್ನು ಕಾನೂನು, ನೀತಿ ಚೌಕಟ್ಟಿನಲ್ಲಿ ಬಲಪಡಿಸಲು ಪೂರಕವಾಗಿರಲಿದೆ. ಹಾಗೆಯೇ ಸಹಕಾರಿ ನೀತಿಗಳನ್ನು, ಅವುಗಳ ಉಪಯೋಗವನ್ನು ತಳಮಟ್ಟದವರೆಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿಯೂ ಮಹತ್ವ ಪಡೆಯಲಿದೆ.
ಕೇಂದ್ರ ಸಚಿವ ಸಂಪುಟ ಪುನಾರಚನೆ ಇಂದು ಆಗಲಿದ್ದು, ಈ ಸಂದರ್ಭದಲ್ಲಿ ಹೊಸ ಸಚಿವಾಲಯದ ಆರಂಭದ ಸುದ್ದಿಯೂ ಹೊರಬಿದ್ದಿದೆ. ಹೊಸ ಖಾತೆಗೆ ಸಚಿವರು ಯಾರು ಎಂಬುದು ಇಂದು ತಿಳಿಯಲಿದೆ. ದೇಶದಲ್ಲಿ ಸಹಕಾರಿ ಮಾದರಿಯ ಆರ್ಥಿಕ ಅಭಿವೃದ್ಧಿ ಹೆಚ್ಚು ಪ್ರಸ್ತುತವಾಗಿದ್ದು, ಈ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳಿಗೆ ವ್ಯವಹಾರಗಳನ್ನು ಸುಲಭಗೊಳಿಸುವ ಕೆಲಸವನ್ನು ಈ ಸಚಿವಾಲಯ ಮಾಡಲಿದೆ. ಹಾಗೆಯೇ ಬಹು ರಾಜ್ಯ ಸಹಕಾರ ಸಂಘಗಳ ಅಭಿವೃದ್ಧಿಯನ್ನು ಶಕ್ತಗೊಳಿಸಲು ಈ ಸಚಿವಾಲಯ ಕೆಲಸ ಮಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.