ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ದಾದಲ್ ಮತ್ತು ಸುಂದರ್ಬನಿ ಸೆಕ್ಟರ್ಗಳಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪಾಕಿಸ್ಥಾನಿ ಉಗ್ರರ ಸಂಹಾರವಾಗಿದೆ. ಈ ಕಾರ್ಯಾಚರಣೆ ಸಂದರ್ಭದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಪಾಕ್ ಉಗ್ರಗಾಮಿಗಳು ಗಡಿಯೊಳಗೆ ನುಸುಳುತ್ತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಈ ಶೋಧ ಕಾರ್ಯಾಚರಣೆ ನಡೆಸಿದ್ದವು. ಈ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗಳ ಮೇಲೆ ಉಗ್ರರು ಗುಂಡು, ಗ್ರೆನೇಡ್ ದಾಳಿ ನಡೆಸಲು ಆರಂಭಿಸಿದವು. ಈ ಸಂದರ್ಭದಲ್ಲಿ ಸೇನೆ ಪ್ರತಿದಾಳಿ ನಡೆಸಿದೆ. ಈ ವೇಳೆ ಇಬ್ಬರು ಉಗ್ರರನ್ನು ಯಮಪುರಿಗಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಹರಿಸಲ್ಪಟ್ಟ ಉಗ್ರರ ಬಳಿ ಇದ್ದ ಎಕೆ 47 ಬಂದೂಕುಗಳು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಭದ್ರತಾ ಪಡೆಯ ಮೂಲಗಳು ಹೇಳಿವೆ.
ಈ ಕಾರ್ಯಾಚರಣೆಯ ವೇಳೆ ವೀರಮರಣವನ್ನಪ್ಪಿದ ಯೋಧರನ್ನು ಶ್ರೀಜಿತ್ ಎಂ. ಮತ್ತು ಮರುಪ್ರೋಲು ಜಶ್ವಂತ್ ರೆಡ್ಡಿ ಎಂದು ಗುರುತಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.