ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಮತ್ತು ಮಳೆಗಾಲ ಚುರುಕಾಗಿರುವ ನಿಟ್ಟಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ 23 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 60 ಕಿ ಮೀ ವೇಗದಲ್ಲಿ ಗಾಳಿ ಬೀಸುವ ಸಂಭವ ಇದ್ದು, 3.7 ಮೀ. ಗಳಷ್ಟು ಎತ್ತರಕ್ಕೆ ಅಲೆಗಳು ಏಳುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ಕಡಲಿಗೆ ಇಳಿಯದಂತೆಯೂ ಮೀನುಗಾರರಿಗೆ ಎಚ್ಚರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.